ಡಿಡಿಪಿಐ, ಬಿಇಒ

ಮಂಗಳೂರು: ಜೆರೋಸಾ ಘಟನೆ ಬೆನ್ನಲ್ಲೇ ಡಿಡಿಪಿಐ ವರ್ಗಾವಣೆ!
ಸಾರ್ವಜನಿಕ ಶಿಕ್ಷಣ ಇಲಾಖೆಯು ದಕ್ಷಿಣ ಕನ್ನಡದ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ (ಡಿಡಿಪಿಐ) ದಯಾನಂದ ಆರ್ ನಾಯ್ಕ್ ಅವರನ್ನು ಬುಧವಾರ ವರ್ಗಾವಣೆ ಮಾಡಿ ಅವರ ಸ್ಥಾನಕ್ಕೆ ಕಲಬುರ್ಗಿ ಡಿಡಿಪಿಐ ಆಗಿದ್ದ ವೆಂಕಟೇಶ ಸುಬ್ರಾಯ ಪಟಗಾರ ಅವರನ್ನು ನೇಮಿಸಿದೆ.

ಕರ್ತವ್ಯಲೋಪ: ಸರ್ಕಾರಿ ಪ್ರೌಢಶಾಲೆ ಮುಖ್ಯೋಪಾಧ್ಯಾಯ ಅಮಾನತು
ಕರ್ತವ್ಯಲೋಪ ಎಸಗಿದ ಹಿನ್ನೆಲೆಯಲ್ಲಿ ಕಲಬುರಗಿಯ ಸರ್ಕಾರಿ ಪ್ರೌಢಶಾಲೆಯ ಪ್ರಭಾರಿ ಮುಖ್ಯೋಪಾಧ್ಯಾಯರನ್ನು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು (ಡಿಡಿಪಿಐ) ಅಮಾನತುಗೊಳಿಸಿದ್ದಾರೆ.

ಬೆಳಗಾವಿ: ಲಂಚ ಪಡೆಯುತ್ತಿದ್ದ ವೇಳೆ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಡಿಡಿಪಿಐ
ಶಿಕ್ಷಣ ಸಂಸ್ಥೆಯ ಪರವಾನಗಿ ನವೀಕರಣ ಮಾಡಿಕೊಡಲು 40 ಸಾವಿರ ರೂಪಾಯಿ ಲಂಚ ಸ್ವೀಕರಿಸುತ್ತಿದ್ದ ಬೆಳಗಾವಿ ಡಿಡಿಪಿಐ ಬಸವರಾಜ್ ನಾಲತವಾಡ ಅವರು ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಶಿಕ್ಷಕರ ನೇಮಕಾತಿ ಪಟ್ಟಿ ಗೊಂದಲ: ಪೋಷಕರ ವಿವರಗಳನ್ನು ಪರಿಗಣಿಸಬೇಕು ಎಂದ ಹೈಕೋರ್ಟ್
ಶಿಕ್ಷಕರ ಹುದ್ದೆಗಳ ನೇಮಕಾತಿಗೆ ಪತಿ/ಪತ್ನಿಯರ ಜಾತಿ ಮತ್ತು ಆದಾಯವನ್ನು ಮಾತ್ರ ಪರಿಗಣಿಸಲಾಗುವುದು ಎಂಬ ರಾಜ್ಯ ಸರ್ಕಾರದ ವಾದವನ್ನು ಒಪ್ಪಿಕೊಳ್ಳಲು ಕರ್ನಾಟಕ ಹೈಕೋರ್ಟ್ ನಿರಾಕರಿಸಿದೆ.

ಶಿಕ್ಷಣ ಇಲಾಖೆ ಹಲವು ವಿಭಾಗದ ಸಿಬ್ಬಂದಿ ವರ್ಗಾವಣೆ
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಗಳಲ್ಲಿ (ಡಯಟ್) ಸೇರಿದಂತೆ ಹಲವಾರು ವರ್ಗಾವಣೆಗಳನ್ನು ಪ್ರಕಟಿಸಿದೆ.

ಪ್ರಧಾನಿ ಮೋದಿ ಕಾರ್ಯಕ್ರಮಕ್ಕೆ ವಿದ್ಯಾರ್ಥಿಗಳ ಕರೆ ತನ್ನಿ: ಜಿಲ್ಲಾ ಪಿಯು ಕಾಲೇಜು ಪ್ರಾಂಶುಪಾಲರಿಗೆ ಶಿಕ್ಷಣ ಇಲಾಖೆ ಸೂಚನೆ
ನವೆಂಬರ್ 11 ರಂದು ಬೆಂಗಳೂರಿನಲ್ಲಿ ನಡೆಯಲಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಕಾರ್ಯಕ್ರಮಕ್ಕೆ ವಿದ್ಯಾರ್ಥಿಗಳನ್ನು ಸಜ್ಜುಗೊಳಿಸಲು ಬೆಂಗಳೂರು ಗ್ರಾಮಾಂತರ ಜಿಲ್ಲೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು (ಡಿಡಿಪಿಐ) ಜಿಲ್ಲಾ ಪಿಯು ಕಾಲೇಜು ಪ್ರಾಂಶುಪಾಲರಿಗೆ ಸೂಚನೆ ನೀಡಿದ್ದಾರೆ.

ಶಾಲಾ ಫೀಸು ಕಟ್ಟಲು ಒತ್ತಡ ಹೇರಿದರೆ ನಿರ್ದಾಕ್ಷಿಣ್ಯ ಕ್ರಮ: ಡಿಡಿಪಿಐ ಎಚ್ಚರಿಕೆ
ಸರ್ಕಾರ ಸುತ್ತೋಲೆಯಂತೆ, ಶಾಲಾ ಫೀಸು ಪಾವತಿಸಲು ಸಾಧ್ಯವಿಲ್ಲದ ಅಥವಾ ಪಾವತಿಸಲು ನಿರಾಕರಿಸುವ ಪೋಷಕರಿಂದ ಮುಂದಿನ ಆದೇಶದವರೆಗೆ ಯಾವುದೇ ಕಾರಣಕ್ಕೂ ಶುಲ್ಕ ವಸೂಲಿ ಮಾಡುವಂತಿಲ್ಲ ಎಂದು ದಕ್ಷಿಣ ಕನ್ನಡ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರು ಖಾಸಗಿ ಶಾಲೆಗಳಿಗೆ ಎಚ್ಚರಿಸಿದ್ದಾರೆ.

ಯಾರೂ ಇಲ್ಲದ ವೇಳೆಯಲ್ಲಿ ವಿದ್ಯಾರ್ಥಿನಿ ಮನೆಗೆ ನುಗ್ಗಿದ ಬಿಇಒ : ಸ್ಥಳೀಯರಿಂದ ಹಲ್ಲೆ
ಮನೆಯಲ್ಲಿ ಯಾರೂ ಇಲ್ಲದ ವೇಳೆ ಬಿಇಒ (ಕ್ಷೇತ್ರ ಶಿಕ್ಷಣಾಧಿಕಾರಿ) ವಿದ್ಯಾರ್ಥಿನಿಯನ್ನು ಭೇಟಿ ಮಾಡಿದ ಆರೋಪದಲ್ಲಿ ಅವರ ಮೇಲೆ ಪೋಷಕರು ಹಾಗೂ ಸ್ಥಳೀಯರು ಹಲ್ಲೆ ನಡೆಸಿರುವ ಘಟನೆ ಗದಗ ಜಿಲ್ಲೆ ಮುಂಡರಗಿಯಲ್ಲಿ ನಡೆದಿದೆ.

ಹಾವೇರಿ: ಪರೀಕ್ಷೆಯಲ್ಲಿ ನಕಲು ತಪ್ಪಿಸಲು ಮಾಸ್ಟರ್ ಪ್ಲಾನ್!
ಪರೀಕ್ಷೆಯಲ್ಲಿ ನಕಲು ತಪ್ಪಿಸಲು ಹಾವೇರಿಯ ಕಾಲೇಜುವೊಂದರ ಆಡಳಿತ ಮಂಡಳಿ ಮಾಸ್ಟರ್ ಪ್ಲಾನ್ ಮಾಡಿದೆ. ಭಗತ್ ಪದವಿ ಪೂರ್ವ ಕಾಲೇಜಿನ ಆಡಳಿತ ಮಂಡಳಿಯ ಕ್ರಮ ಇದೀಗ ಎಲ್ಲೆಡೆ ವೈರಲ್ ಆಗಿದೆ.

