ಡಿಡಿಸಿ ಚುನಾವಣೆ

ಜಮ್ಮು ಕಾಶ್ಮೀರದ ಡಿಡಿಸಿ ಗೆಲುವಿನಿಂದ ಬಿಜೆಪಿ ಅಲೆ ಸಾಬೀತು; ನಳಿನ್‌ಕುಮಾರ್ ಕಟೀಲ್
ಜಮ್ಮು -ಕಾಶ್ಮೀರದ ಜಿಲ್ಲಾ ಅಭಿವೃದ್ಧಿ ಮಂಡಳಿಯ (ಡಿಡಿಸಿ) ಚುನಾವಣೆಯಲ್ಲಿ ಬಿಜೆಪಿ ಅತಿ ಹೆಚ್ಚು ಸ್ಥಾನ ಗೆದ್ದ ಏಕೈಕ ಪಕ್ಷವಾಗಿ ಹೊರಹೊಮ್ಮಿದೆ. ಈ ಗೆಲುವಿನಿಂದ ದೇಶದಲ್ಲಿ ರೈತಪರ ಮತ್ತು ಅಭಿವೃದ್ಧಿ ಪರ ಇರುವ ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ಅಲೆ ಇರುವುದು ಸಾಬೀತಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ಕುಮಾರ್ ಕಟೀಲ್ ತಿಳಿಸಿದ್ದಾರೆ.

ಡಿಡಿಸಿ ಚುನಾವಣೆಯಲ್ಲಿ ಸೋತಿರುವ ಬಿಜೆಪಿ ಸದ್ಯಕ್ಕೆ ಕಾಶ್ಮೀರ ವಿಧಾನಸಭೆ ಚುನಾವಣೆ ನಡೆಸುವುದಿಲ್ಲ: ಒಮರ್ ಅಬ್ದುಲ್ಲಾ
ಪೀಪಲ್ಸ್ ಅಲೈಯನ್ಸ್ ಫಾರ್ ಗುಪ್ಕರ್(ಪಿಎಜಿಡಿ) ಘೋಷಣೆ ಮಾಡಿದ ನಂತರ ನಡೆದ ಜಿಲ್ಲಾ ಅಭಿವೃದ್ಧಿ ಮಂಡಳಿ(ಡಿಡಿಸಿ) ಚುನಾವಣೆಯಲ್ಲಿ ಬಿಜೆಪಿ ಹೀನಾಯ ಸೋಲು ಅನುಭವಿಸಿದ್ದು,...

ಜಮ್ಮು-ಕಾಶ್ಮೀರ ಡಿಡಿಸಿ ಚುನಾವಣೆ ಫಲಿತಾಂಶ: ಗುಪ್ಕಾರ್ ಮೈತ್ರಿಕೂಟ 73 ರಲ್ಲಿ, ಬಿಜೆಪಿ 50 ರಲ್ಲಿ ಮುನ್ನಡೆ; ಪಕ್ಷೇತರರೇ ನಿರ್ಣಾಯಕ?
ಇತ್ತೀಚೆಗಷ್ಟೇ ನಡೆದಿದ್ದ ಜಮ್ಮು-ಕಾಶ್ಮೀರ ಜಿಲ್ಲಾ ಅಭಿವೃದ್ಧಿ ಪರಿಷತ್ (ಡಿಡಿಸಿ) ಚುನಾವಣೆಯಲ್ಲಿ ಪೀಪಲ್ಸ್ ಅಲಾಯನ್ಸ್ ಫಾರ್ ಗುಪ್ಕಾರ್ ಡಿಕ್ಲರೇಷನ್ (ಗುಪ್ಕಾರ್ ಮೈತ್ರಿಕೂಟ, ಪಿಎಜಿಡಿ) 73 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದರೆ, ಬಿಜೆಪಿ 50 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ.

ಜಮ್ಮು-ಕಾಶ್ಮೀರದಲ್ಲಿ 5 ನೇ ಹಂತದ ಡಿಡಿಸಿ ಚುನಾವಣೆ ಮತದಾನ
ಜಮ್ಮು-ಕಾಶ್ಮೀರದಲ್ಲಿ ಜಿಲ್ಲಾ ಅಭಿವೃದ್ಧಿ ಪರಿಷತ್ ಚುನಾವಣೆಗೆ 5 ನೇ ಹಂತದ ಮತದಾನ ಪ್ರಾರಂಭವಾಗಿದೆ.

ಭಯೋತ್ಪಾದಕನನ್ನು ವಿವಾಹವಾಗಿದ್ದ ಪಿಒಕೆ ಮಹಿಳೆ ಜಮ್ಮು-ಕಾಶ್ಮೀರದ ಡಿಡಿಸಿ ಚುನಾವಣೆ ಅಭ್ಯರ್ಥಿ!
ಭಯೋತ್ಪಾದಕನನ್ನು ವಿವಾಹವಾಗಿದ್ದ ಪಾಕ್ ಆಕ್ರಮಿತ ಕಾಶ್ಮೀರದ ಮಹಿಳೆ 2020 ರ ಜಮ್ಮು-ಕಾಶ್ಮೀರ ಜಿಲ್ಲಾ ಅಭಿವೃದ್ಧಿ ಪರಿಷತ್ ಚುನಾವಣೆಗೆ ಸ್ಪರ್ಧಿಸಿದ್ದಾರೆ.

ಜಮ್ಮು-ಕಾಶ್ಮೀರ: ಡಿಡಿಸಿ ಚುನಾವಣೆ ಮೂರನೇ ಹಂತದಲ್ಲಿ ಶೇ.50ಕ್ಕೂ ಹೆಚ್ಚು ಮತದಾನ
ಜಮ್ಮು-ಕಾಶ್ಮೀರದಲ್ಲಿ ಡಿಡಿಸಿ ಚುನಾವಣೆಯ ಮೂರನೇ ಹಂತದಲ್ಲಿ ಶೇ.50 ಕ್ಕೂ ಹೆಚ್ಚು ಮತದಾನ ನಡೆದಿದೆ.

ಜಮ್ಮು-ಕಾಶ್ಮೀರ ಡಿಡಿಸಿ ಚುನಾವಣೆ: ಎರಡನೇ ಹಂತದ ಮತದಾನ ಪ್ರಗತಿಯಲ್ಲಿ, 321 ಅಭ್ಯರ್ಥಿಗಳು ಕಣದಲ್ಲಿ!
ಜಮ್ಮು-ಕಾಶ್ಮೀರದ ಜಿಲ್ಲಾ ಅಭಿವೃದ್ಧಿ ಮಂಡಳಿ (ಡಿಡಿಸಿ) ಚುನಾವಣೆಗೆ ಎರಡನೇ ಹಂತದ ಮತದಾನ ಪ್ರಗತಿಯಲ್ಲಿದ್ದು ಚಳಿಯ ನಡುವೆ ಮತದಾರರು ಮತಗಟ್ಟೆಗಳಿಗೆ ಬಂದು ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ. ತೀವ್ರ ಬಿಗಿ ಭದ್ರತೆ ಏರ್ಪಡಿಸಲಾಗಿದೆ.

ಜಮ್ಮು-ಕಾಶ್ಮೀರ: ಜಿಲ್ಲಾ ಅಭಿವೃದ್ಧಿ ಮಂಡಳಿ ಚುನಾವಣೆಯ ಮೊದಲ ಹಂತದ ಮತದಾನ ಆರಂಭ
ಕಣಿವೆ ಪ್ರದೇಶ ಜಮ್ಮು-ಕಾಶ್ಮೀರದ ಜಿಲ್ಲಾ ಅಭಿವೃದ್ಧಿ ಮಂಡಳಿ ಚುನಾವಣೆಯ(ಡಿಸಿಸಿ) ಮೊದಲ ಹಂತದ ಮತದಾನ ಶನಿವಾರ ಬೆಳಗ್ಗೆ 7 ಗಂಟೆಗೆ ಆರಂಭವಾಗಿದೆ.

ಡಿಡಿಸಿ ಚುನಾವಣೆ ಮೇಲೆ ಕಣ್ಣಿಟ್ಟಿದ್ದರು ಹತ್ಯೆಯಾದ ಉಗ್ರರು: ಜಮ್ಮು ಮತ್ತು ಕಾಶ್ಮೀರ ಪೊಲೀಸ್
ಶ್ರೀನಗರ ರಾಷ್ಟ್ರೀಯ ಹೆದ್ದಾರಿ ನಾಗ್ರೊಟಾದಲ್ಲಿ ನಡೆದ ಎನ್ಕೌಂಟರ್ ನಲ್ಲಿ ಹತರಾದ ನಾಲ್ವರು ಉಗ್ರರು ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆಯುವ ಜಿಲ್ಲಾ ಅಭಿವೃದ್ಧಿ ಮಂಡಳಿಯ (ಡಿಡಿಸಿ) ಚುನಾವಣೆಗೆ ಅಡ್ಡಿಯುಂಟು ಮಾಡುವ ಉದ್ದೇಶವನ್ನು ಹೊಂದಿದ್ದರು ಎಂಬ ವಿಚಾರ ಇದೀಗ ಬಹಿರಂಗಗೊಂಡಿದೆ.

