ರಾಜ್ಯ15 ದಿನದಲ್ಲಿ ಸರ್ಕಾರಿ ಡಿಪ್ಲೊಮಾ, ಪಾಲಿಟೆಕ್ನಿಕ್, ಚಿತ್ರಕಲಾ ಸಿಬ್ಬಂದಿಗಳಿಗೆ ವೇತನ: ಸರ್ಕಾರದ ಭರವಸೆ
ರಾಜ್ಯದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು ಹಾಗೂ ಖಾಸಗಿ ಅನುದಾನಿತ ಚಿತ್ರಕಲಾ ಮಹಾವಿದ್ಯಾಲಯಗಳ ಅತಿಥಿ ಉಪನ್ಯಾಸಕರಿಗೆ, ಸಿಬ್ಬಂದಿಗಳ ಬಾಕಿ ವೇತನವನ್ನು ಇನ್ನು 15 ದಿನಗಳಲ್ಲಿ ಬಿಡುಗಡೆ ಮಾಡುವುದಾಗಿ ಉನ್ನತ ಶಿಕ್ಷಣ ಸಚಿವ ಡಾ.ಅಶ್ವತ್ಥನಾರಾಯಣ ಮೇಲ್ಮನೆಯ ಸದನಕ್ಕೆ ಭರವಸೆ ನೀಡಿದ್ದಾರೆ.