ಡಿಬಿ ನಟೇಶ್

ಲಂಚ ಆರೋಪ: ಸ್ನೇಹಮಯಿ ಕೃಷ್ಣಗೆ ನಕಲಿ ಆಡಿಯೋ ನೀಡಿದ್ದ ವ್ಯಕ್ತಿಯ ಬಂಧನ
ಸ್ನೇಹಮಯಿ ಕೃಷ್ಣ ಅವರು, ಮುಡಾ ಮಾಜಿ ಆಯುಕ್ತ ಡಿಬಿ ನಟೇಶ್ ಅವರು ಶಾಲಿನಿ ರಜನೀಶ್ ಅವರಿಗೆ ಲಂಚ ಕೊಟ್ಟು ಮುಂಬಡ್ತಿ ಪಡೆದಿದ್ದಾರೆಂದು ಗಂಭೀರ ಆರೋಪ ಮಾಡಿದ್ದರು. ಈ ಸಂಬಂಧ ಸಿಸಿಬಿ ಪೊಲೀಸರು ನಿನ್ನೆ ಸ್ನೇಹಮಯಿ ಕೃಷ್ಣ ಅವರನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆ ಮಾಡಿತ್ತು.

ಮುಡಾ ಮಾಜಿ ಆಯುಕ್ತ ನಟೇಶ್ ಗೆ ಬಿಗ್ ರಿಲೀಫ್: ಇಡಿ ಸಮನ್ಸ್ ರದ್ದುಗೊಳಿಸಿದ ಹೈಕೋರ್ಟ್
ಮುಡಾ ಹಗರಣದ ಕುರಿತು ಜಾರಿ ನಿರ್ದೇಶನಾಲಯ ತನ್ನ ಮನೆಯಲ್ಲಿ ನಡೆಸಿರುವ ಶೋಧ ಕಾರ್ಯ ಹಾಗೂ ಇದಕ್ಕೆ ಸಂಬಂಧಿಸಿದಂತೆ ಸಮನ್ಸ್ ನೀಡಿ, ದಾಖಲು ಮಾಡಿಕೊಂಡಿರುವ ತಮ್ಮ ಪ್ರಮಾಣಿತ ಹೇಳಿಕೆ ಪ್ರಶ್ನಿಸಿ ನಟೇಶ್ ಅವರು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.

ಮುಡಾ ಹಗರಣ: ನಟೇಶ್ ವಿರುದ್ಧ ಪ್ರಾಸಿಕ್ಯೂಷನ್ಗೆ ಸರ್ಕಾರ ಅನುಮತಿ; ಲೋಕಾಯುಕ್ತ ನೋಟಿಸ್
ರಾಜ್ಯ ಸರ್ಕಾರ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿದ ಬೆನ್ನಲ್ಲೇ ಲೋಕಾಯುಕ್ತ ಪೊಲೀಸರು ಆರೋಪಿ ನಟೇಶ್ ಗೆ ನೋಟಿಸ್ ಜಾರಿ ಮಾಡಿದೆ.

ಮುಡಾ ಹಗರಣ: ಮಾಜಿ ಆಯುಕ್ತ ಡಿಬಿ ನಟೇಶ್ ಇಡಿ ವಶಕ್ಕೆ
ನಟೇಶ್ ಮನೆ ಮೇಲೆ ನಿನ್ನೆ ಇಡಿ ಅಧಿಕಾರಿಗಳು ದಾಳಿ ನಡೆಸಿ ವಿಚಾರಣೆಗೆ ಒಳಪಡಿಸಿದ್ದರು. ಪ್ರಸ್ತುತ ನಟೇಶ್ ಅವರನ್ನು ವಶಕ್ಕೆ ಪಡೆದ ಇಡಿ ಅಧಿಕಾರಿಗಳು ಶಾಂತಿನಗರದ ಇಡಿ ಕಚೇರಿಗೆ ಕರೆದೊಯ್ದಿದ್ದಾರೆ.

