ಡಿಸಿಎಂ ಅಶ್ವತ್ಥನಾರಾಯಣ

ಗ್ರಾಮ ಪಂಚಾಯಿತಿಗಳಿಗೆ ವರ್ಷಕ್ಕೆ 1.5 ಕೋಟಿ ರೂ. ನೇರ ಅನುದಾನ, ನರೇಗಾ ಯೋಜನೆ ಶಿಫ್ಟ್: ಡಿಸಿಎಂ
ಆಡಳಿತ ವಿಕೇಂದ್ರೀಕರಣವನ್ನು ಮತ್ತಷ್ಟು ಉತ್ತಮವಾಗಿ ಅನುಷ್ಠಾನಗೊಳಿಸಿ ಪ್ರತಿ ಗ್ರಾಮ ಪಂಚಾಯಿತಿಗೂ ವರ್ಷಕ್ಕೆ 1.5 ಕೋಟಿ ರೂ. ಅನುದಾನವನ್ನು ನೇರವಾಗಿ ಬಿಡುಗಡೆ ಮಾಡಲಾಗುವುದು ಎಂದು ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ ಅವರು ಹೇಳಿದ್ದಾರೆ.

ಅಕ್ಟೋಬರ್ ನಿಂದ ಪದವಿ ತರಗತಿ ಆರಂಭ, ಸೆ.1 ರಿಂದಲೇ ಆನ್ ಲೈನ್ ತರಗತಿ:ಅಶ್ವತ್ಥನಾರಾಯಣ
ಸೆಪ್ಟೆಂಬರ್ 1ರಿಂದಲೇ ಪದವಿ ಕಾಲೇಜುಗಳ ಶೈಕ್ಷಣಿಕ ವರ್ಷವನ್ನು ಆನ್ ಲೈನ್ ಮೂಲಕವೇ ಪೂರ್ಣ ಪ್ರಮಾಣದಲ್ಲಿ ಆರಂಭ ಮಾಡಲಾಗುತ್ತಿದ್ದು, ಅಕ್ಟೋಬರ್ ನಿಂದ ನೇರ (ಆಫ್‌ಲೈನ್) ತರಗತಿಗಳು ಶುರುವಾಗಲಿವೆ...

ಆಗಸ್ಟ್ ಮಧ್ಯಭಾಗದಲ್ಲಿ ಕೆಸಿಇಟಿ ಫಲಿತಾಂಶ ಪ್ರಕಟ: ಡಿಸಿಎಂ ಅಶ್ವತ್ಥನಾರಾಯಣ
ಎಂಜಿನಿಯರಿಂಗ್ ಕಾಲೇಜುಗಳಿಗೆ ಪ್ರವೇಶಕ್ಕಾಗಿ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆಯ (ಕೆಸಿಇಟಿ) ಫಲಿತಾಂಶಗಳನ್ನು ಆಗಸ್ಟ್ 15 ರೊಳಗೆ ಘೋಷಿಸಲಾಗುವುದು ಎಂದು ಉಪಮುಖ್ಯಮಂತ್ರಿ ಮತ್ತು ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್. .ಅಶ್ವತ್ಥನಾರಾಯಣ ಹೇಳಿದ್ದಾರೆ. ಕಾಲೇಜುಗಳು ಸೆಪ್ಟೆಂಬರ್ ವೇಳೆಗೆ ಪ್ರವೇಶಕ್ಕೆ ತಯಾರಿ ನಡೆಸಲು ಅನುಕೂಲವಾಗುತ್ತದೆ. ಆ ವೇಳೆ ಶಾಲೆ-ಕಾಲೇಜುಗಳು ಪು

ಎದೆ ಎಕ್ಸ್ ರೇಯಿಂದಲೇ ಕೋವಿಡ್ ಪತ್ತೆ: 6 ಹೊಸ ಉತ್ಪನ್ನ ಬಿಡುಗಡೆ ಮಾಡಿದ ಅಶ್ವತ್ಥ್ ನಾರಾಯಣ್
ವಿದೇಶಗಳಿಂದ ಮಾತ್ರ ಆಮದು ಮಾಡಿಕೊಂಡು ಕೋವಿಡ್- 19 ಸೋಂಕು ಪತ್ತೆ ಮಾಡುವ ಅತ್ಯಾಧುನಿಕ ಎದೆ ಎಕ್ಸರೆ ಸೇರಿ ಆರು ಪ್ರಮುಖ ಉತ್ಪನ್ನಗಳನ್ನು ಇದೀಗ ದೇಶಿಯವಾಗಿ, ಬೆಂಗಳೂರಿನ ಕನ್ನಡದ ವಿಜ್ಞಾನಿಗಳು ಮತ್ತು ಸಂಶೋಧಕರು ಅಭಿವೃದ್ಧಿಪಡಿಸಿದ್ದಾರೆ. ಇದರೊಂದಿಗೆ ಕೋವಿಡ್ ವಿರುದ್ಧದ ಸಮರದಲ್ಲಿ ರಾಜ್ಯಕ್ಕೆ ಮಹತ್ವದ ಮುನ್ನಡೆ ಸಿಕ್ಕಿದಂತಾಗಿದೆ.

ಬೆಂಗಳೂರಿನಲ್ಲಿ ಅಮೆರಿಕಾ ವೀಸಾ ಕೇಂದ್ರ ಸ್ಥಾಪಿಸಿ: ಡಿಸಿಎಂ ಡಾ. ಅಶ್ವತ್ಥನಾರಾಯಣ ಒತ್ತಾಯ
ಬೆಂಗಳೂರಿನಲ್ಲಿ ಅಮೆರಿಕದ ವೀಸಾ ಕೇಂದ್ರ ಸ್ಥಾಪಿಸಬೇಕು ಎಂಬ ಬಹುದಿನಗಳ ಬೇಡಿಕೆಯನ್ನು ಪರಿಗಣಿಸುವ ಜತೆಗೆ ಕರ್ನಾಟಕದಲ್ಲಿ ಬಂಡವಾಳ ಹೂಡುವಂತೆ ಅಮೆರಿಕದ ಕಾನ್ಸುಲೇಟ್ ಜನರಲ್ ಬಳಿ ಉಪಮುಖ್ಯಮಂತ್ರಿ ಡಾ. ಸಿ.ಎನ್.ಅಶ್ವತ್ಥನಾರಾಯಣ ಮನವಿ ಮಾಡಿದ್ದಾರೆ.

ಯೂಟ್ಯೂಬ್‌ನಲ್ಲಿ ಪಾಠ, ಜೂನ್‌ನಲ್ಲಿ ಕಾಲೇಜು ಪರೀಕ್ಷೆ ನಡೆಸುವ ಚಿಂತನೆ: ಡಿಸಿಎಂ ಅಶ್ವತ್ಥನಾರಾಯಣ
ಲಾಕ್‌ಡೌನ್ ಹಿನ್ನೆಲೆಯಲ್ಲಿ ಬಾಕಿ ಉಳಿದಿರುವ ವಿಶ್ವವಿದ್ಯಾಲಯಗಳ ಪರೀಕ್ಷೆಗಳನ್ನು ಬರುವ ಜೂನ್ ವೇಳೆಗೆ ನಡೆಸುವ ಉದ್ದೇಶ ಇದ್ದು, ಪರಿಸ್ಥಿತಿ ನೋಡಿಕೊಂಡು ನಿರ್ಧಾರ ಪ್ರಕಟಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಾ. ಅಶ್ವತ್ಥನಾರಾಯಣ ಹೇಳಿದ್ದಾರೆ.

ರಾಯಚೂರು ಪಾಲಿಟೆಕ್ನಿಕ್ ಕಾಲೇಜಿನ ಹಾಸ್ಟೆಲ್ ಆರಂಭಕ್ಕೆ ಡಾ. ಅಶ್ವತ್ಥನಾರಾಯಣ ಸೂಚನೆ
ಕಟ್ಟಡ ನಿರ್ಮಾಣಗೊಂಡು ದಶಕ ಕಳೆದರೂ ಉದ್ಘಾಟನಾ ಭಾಗ್ಯ ಕಾಣದ ಇಲ್ಲಿನ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನ ವಸತಿ ನಿಲಯಗಳನ್ನು ಶೀಘ್ರದಲ್ಲೇ ಆರಂಭಿಸಲು ಉಪಮುಖ್ಯಮಂತ್ರಿ ಡಾ. ಅಶ್ವತ್ಥನಾರಾಯಣ ಮಂಗಳವಾರ ಸೂಚನೆ ನೀಡಿದ್ದಾರೆ.

