ರಾಜ್ಯ1242 ಸಹಾಯಕ ಪ್ರಾಧ್ಯಾಪಕರು, 310 ಪ್ರಾಂಶುಪಾಲರ ನೇರ ನೇಮಕ: ಡಾ. ಸಿ.ಎನ್. ಅಶ್ವತ್ಥ ನಾರಾಯಣ
ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿ ಮಾಡುತ್ತಿರುವ ಬೆನ್ನಲ್ಲೇ ರಾಜ್ಯ ಸರ್ಕಾರ ಇನ್ನು ಆರು ತಿಂಗಳಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಿಗೆ 1,242 ಸಹಾಯಕ ಪ್ರಾಧ್ಯಾಪಕರು ಹಾಗೂ 310 ಪ್ರಾಂಶುಪಾಲರನ್ನು ನೇರ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ ಎಂದು ಉನ್ನತ ಶಿಕ್ಷಣ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥ ನಾರಾಯಣ ತಿಳಿಸಿದ್ದಾರೆ.