ರಾಜ್ಯಯುವಕರಿಗೆ ಉದ್ಯೋಗ ಸೃಷ್ಟಿಸಲು, ಕರಾವಳಿ ಭಾಗಕ್ಕೆ ಪ್ರತ್ಯೇಕ ಪ್ರವಾಸೋದ್ಯಮ ನೀತಿ: ಡಿ.ಕೆ ಶಿವಕುಮಾರ್
ದಕ್ಷಿಣ ಕನ್ನಡ ಜಿಲ್ಲೆ ಬರಡು ಭೂಮಿಯಂತಾಗುತ್ತಿದೆ. ಕೋಮು ಗಲಭೆ ಸೇರಿದಂತೆ ಇತರ ಸಮಸ್ಯೆಗಳಿಂದಾಗಿ ವಿದ್ಯಾಸಂಸ್ಥೆಗಳಿಗೆ ಹೊರ ಜಿಲ್ಲೆಗಳಿಂದ ವಿದ್ಯಾರ್ಥಿಗಳು ಬರುತ್ತಿಲ್ಲ. ಇಲ್ಲಿ ಹುಟ್ಟಿದ ಅನೇಕ ಬ್ಯಾಂಕ್ ಗಳು ಮಾಯವಾಗಿವೆ. ಇಲ್ಲಿನ ಯುವಕರು ಸೌದಿ ಅರೇಬಿಯಾ, ಮುಂಬೈ, ಬೆಂಗಳೂರಿಗೆ ಉದ್ಯೋಗ ಅರಸಿ ಹೋಗುತ್ತಿದ್ದಾರೆ.