ರಾಜ್ಯಲೋಕಾಯುಕ್ತ ದಾಳಿ: ಮಂಗಳೂರು ಸಹಾಯಕ ಡ್ರಗ್ ಕಂಟ್ರೋಲರ್ ಬಳಿ 3.37 ಕೋಟಿ ರೂ. ಮೌಲ್ಯದ ಅಕ್ರಮ ಆಸ್ತಿ ಪತ್ತೆ
ಅಕ್ರಮ ಆಸ್ತಿ ಗಳಿಕೆ ಆರೋಪ ಸಂಬಂಧ ಲೋಕಾಯುಕ್ತ ಪೊಲೀಸರು ಏಕಕಾಲದಲ್ಲಿ ಮಂಗಳೂರಿನ ಪ್ರಾದೇಶಿಕ ಉಪ ಡ್ರಗ್ ಕಂಟ್ರೋಲರ್ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸಹಾಯಕ ಡ್ರಗ್ ಕಂಟ್ರೋಲರ್ ಬಾಬು ಬಿ.ಎನ್ ಅವರ ಮನೆ ಹಾಗೂ ವಿವಿಧ ಸ್ಥಳಗಳಲ್ಲಿ ದಾಳಿ ನಡೆಸಿದ್ದು ಕೋಟ್ಯಂತರ ರೂಪಾಯಿ ಮೌಲ್ಯದ ಆಸ್ತಿ ಪತ್ತೆಯಾಗಿದೆ.