ಬಿಜೆಪಿ ಆಡಳಿತದ ತ್ರಿಪುರದಲ್ಲಿ ಬಂಧಿಸಲಾಗಿದ್ದ ರಾಜಕೀಯ ತಂತ್ರಜ್ಞ ಪ್ರಶಾಂತ್ ಕಿಶೋರ್ ಅವರ ಐ-ಪ್ಯಾಕ್ ತಂಡದ 23 ಸದಸ್ಯರನ್ನು ಇಂದು ಸ್ಥಳೀಯ ನ್ಯಾಯಾಲಯವೊಂದರ ಮುಂದೆ ಹಾಜರುಪಡಿಸಲಾಯಿತು. ನ್ಯಾಯಾಲಯ ಅವರಿಗೆ ಜಾಮೀನು ನೀಡಿತು.