ದೇಶತಮಿಳು ನಾಡಿನ ಹಲವು ಜಿಲ್ಲೆಗಳಲ್ಲಿ ಮತ್ತೆ ಭಾರೀ ಮಳೆ: ಸರ್ಕಾರಿ ಕಚೇರಿ, ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ
ವರ್ಷಾಂತ್ಯಕ್ಕೆ ತಮಿಳು ನಾಡಿನ ರಾಜಧಾನಿ ಚೆನ್ನೈ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಅನೇಕ ತಗ್ಗು ಪ್ರದೇಶಗಳಲ್ಲಿ ನೀರು ನುಗ್ಗಿವೆ. ಹಲವು ಪ್ರದೇಶಗಳು ಜಲಾವೃತವಾಗಿವೆ. ಅಗತ್ಯ ಸೇವೆಗಳು ಹೊರತುಪಡಿಸಿ ಉಳಿದೆಲ್ಲಾ ಸರ್ಕಾರಿ ಕಚೇರಿಗಳು ಇಂದು ಶುಕ್ರವಾರ ಚೆನ್ನೈ, ತಿರುವಲ್ಲೂರು, ಕಾಂಚೀಪುರಂ ಮತ್ತು ಚೆಂಗಲ್ಪಟ್ಟು ಜಿಲ್ಲೆಗಳಲ್ಲಿ ಮುಚ್ಚಿವೆ.