ಸಿನಿಮಾ ಸುದ್ದಿಎಲ್ಲ ಭಾಷೆಯ ಸಿನಿಮಾಗಳನ್ನು ನೋಡೋರು ಕನ್ನಡಿಗರು; ನಟ ಸಿದ್ದಾರ್ಥ್ ಗೆ ಇಂಡಸ್ಟ್ರಿ ಪರವಾಗಿ ಕ್ಷಮೆ ಕೇಳುತ್ತೇನೆ: ಶಿವರಾಜ್ ಕುಮಾರ್
ತಮಿಳು ನಟ ಸಿದ್ಧಾರ್ಥ್ ಅವರು ಬೆಂಗಳೂರಿನಲ್ಲಿ ನಡೆಸಲು ಉದ್ದೇಶಿಸಿದ್ದ ಸುದ್ದಿಗೋಷ್ಠಿಗೆ ಅಡ್ಡಿಪಡಿಸಿದವರು ಯಾರು ಎಂದು ನನಗೆ ಗೊತ್ತಿಲ್ಲ, ಆದರೆ ಅದು ಸರಿಯಲ್ಲ, ಅವರ ಪರವಾಗಿ ನಾನು ನಟ ಸಿದ್ಧಾರ್ಥ್ ಗೆ ಕ್ಷಮೆ ಕೇಳುತ್ತೇನೆ ಎಂದು ಸ್ಯಾಂಡಲ್ ವುಡ್ ಹಿರಿಯ ನಟ ಶಿವರಾಜ್ ಕುಮಾರ್ ಹೇಳಿದ್ದಾರೆ.