ದೇಶಅಕ್ರಮ ಹಣ ವರ್ಗಾವಣೆ ಪ್ರಕರಣ: ತಮಿಳುನಾಡಿನ ಮತ್ತೋರ್ವ ಸಚಿವ, ಪುತ್ರನ ಮನೆ ಮೇಲೆ ಇಡಿ ದಾಳಿ
ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಡಿಎಂಕೆ ನಾಯಕ ಮತ್ತು ತಮಿಳುನಾಡು ಉನ್ನತ ಶಿಕ್ಷಣ ಸಚಿವ ಕೆ ಪೊನ್ಮುಡಿ ಮತ್ತು ಅವರ ಪುತ್ರನಾಗಿರುವ ಸಂಸದ ಗೌತಮ್ ಸಿಗಮಣಿ ಅವರ ಮನೆಗಳ ಮೇಲೆ ಜಾರಿ ನಿರ್ದೇಶನಾಲಯ ಸೋಮವಾರ ದಾಳಿ ನಡೆಸಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.