ದೇಶನವದೆಹಲಿ: ತಮಿಳುನಾಡು ಕಾಂಗ್ರೆಸ್ ಶಾಸಕಿ ವಿಜಯಧರಣಿ ಬಿಜೆಪಿಗೆ ಸೇರ್ಪಡೆ
ತಮಿಳುನಾಡಿನ ಕಾಂಗ್ರೆಸ್ ಶಾಸಕಿ ವಿಜಯಧರಣಿ ಶನಿವಾರ ಇಲ್ಲಿನ ಪಕ್ಷದ ಪ್ರಧಾನ ಕಚೇರಿಯಲ್ಲಿ ಬಿಜೆಪಿಗೆ ಸೇರ್ಪಡೆಗೊಂಡರು. ಕನ್ನಿಯಕುಮಾರಿ ಜಿಲ್ಲೆಯ ವಿಲವಂಕೋಡ್ನಿಂದ ಮೂರು ಬಾರಿ ಶಾಸಕರಾಗಿದ್ದ ವಿಜಯಧರಣಿ ಕೇಂದ್ರ ಮಾಹಿತಿ ಮತ್ತು ಪ್ರಸಾರ ರಾಜ್ಯ ಸಚಿವ ಎಲ್. ಮುರುಗನ್ ಅವರ ಸಮ್ಮುಖದಲ್ಲಿ ಕೇಸರಿ ಪಕ್ಷ ಸೇರಿದರು.