ದೇಶಕಾವೇರಿ ವಿವಾದ: ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಭೇಟಿ ಮಾಡಿದ ತಮಿಳುನಾಡು ಸಂಸದರು
ಜಲಸಂಪನ್ಮೂಲ ಸಚಿವ ದುರೈಮುರುಗನ್ ನೇತೃತ್ವದ ಸರ್ವಪಕ್ಷಗಳ ತಮಿಳುನಾಡು ಸಂಸದರ ನಿಯೋಗ ಮಂಗಳವಾರ ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರಿಗೆ ಮನವಿ ಸಲ್ಲಿಸಿ, ಬಾಕಿ ಇರುವ ಕಾವೇರಿ ನೀರನ್ನು ತಮಿಳುನಾಡಿಗೆ ಬಿಡುವಂತೆ ಕರ್ನಾಟಕಕ್ಕೆ ನಿರ್ದೇಶನ ನೀಡಬೇಕು ಎಂದು ಒತ್ತಾಯಿಸಿದರು.