ತಾವರ್ ಚಂದ್ ಗೆಹ್ಲೋಟ್

ಬಳಕೆಯಾಗದ NICE ಭೂಮಿ ವಶಕ್ಕೆ ಪಡೆದು ಬಿಡದಿ ಟೌನ್‌ಶಿಪ್‌ಗೆ ಬಳಸಿ: ರಾಜ್ಯ ಸರ್ಕಾರಕ್ಕೆ ರಾಜ್ಯಪಾಲರ ಸೂಚನೆ
ನೈಸ್ ಯೋಜನೆಯಿಂದ ವಶಪಡಿಸಿಕೊಳ್ಳಲಾದ ಸರ್ಕಾರಿ ಭೂಮಿಯನ್ನು ಬಿಡದಿ ಪಟ್ಟಣಕ್ಕೆ ಬಳಸಬಹುದು, ಇದರಿಂದಾಗಿ ಖಾಸಗಿ ಕೃಷಿ ಭೂಮಿಯ ಕಡ್ಡಾಯ ಸ್ವಾಧೀನದ ವ್ಯಾಪ್ತಿಯನ್ನು ಕಡಿಮೆ ಮಾಡಬಹುದು ಎಂದು ರಾಜ್ಯಪಾಲರು ಸೂಚಿಸಿದ್ದಾರೆ.

ಲೋಕಭವನ-ಸರ್ಕಾರದ ನಡುವೆ ಮತ್ತೊಂದು ಸುತ್ತಿನ ಸಂಘರ್ಷ: ಮತ ಪತ್ರ ಬಳಕೆ ಮಸೂದೆಗೆ ರಾಜ್ಯಪಾಲರ ತಡೆ
ಕಳೆದ ಅಧಿವೇಶನದಲ್ಲಿ ಅಂಗೀಕಾರಗೊಂಡ 11 ವಿಧೇಯಕಗಳ ಪೈಕಿ, ‘ಇವ ನಮ್ಮವ ಇವ ನಮ್ಮವ’ ವಿಧೇಯಕವೂ ಸೇರಿದಂತೆ 10 ವಿಧೇಯಕಕ್ಕೆ ಮಾತ್ರ ಅಂಕಿತ ಹಾಕಿದ್ದಾರೆ.

ಮುಜರಾಯಿ ತಿದ್ದುಪಡಿ ವಿಧೇಯಕಕ್ಕೆ ಅಂಕಿತ ಹಾಕುವಂತೆ ರಾಜ್ಯಪಾಲರಿಗೆ ಅರ್ಚಕರ ಒಕ್ಕೂಟ ಮನವಿ
ಶ್ರೀಮಂತ ಎ ಮತ್ತು ಬಿ ವರ್ಗದ ದೇವಾಲಯಗಳು ತಮ್ಮ ಹೆಚ್ಚುವರಿ ಆದಾಯವನ್ನು ಹಳ್ಳಿಗಳಲ್ಲಿನ ಅನುದಾನರಹಿತ ವರ್ಗದ ಸಿ ದೇವಾಲಯಗಳೊಂದಿಗೆ ಹಂಚಿಕೊಳ್ಳಲು ಅವಕಾಶ ನೀಡುತ್ತದೆ .

ಸರ್ಕಾರ-ರಾಜಭವನ ಜಟಾಪಟಿ: ಮತ್ತೆ ಎರಡು ವಿಧೇಯಕ ವಾಪಸ್
ಕರ್ನಾಟಕ ಸಹಕಾರಿ ಸಂಘಗಳ ತಿದ್ದುಪಡಿ ಮಸೂದೆಗೆ ರಾಜ್ಯಪಾಲರು ಹಲವು ಆಕ್ಷೇಪಗಳನ್ನು ಮಾಡಿದ್ದಾರೆ. ಸಹಕಾರಿ ಸಂಘಗಳಿಗೆ ಮೀಸಲಾತಿ ಆಧಾರದ ಮೇಲೆ ನಾಮನಿರ್ದೇಶನ ಮಾಡುವ ಬಗ್ಗೆ ಸರ್ಕಾರವು ತಿದ್ದುಪಡಿ ಮಾಡಿತ್ತು.

ಮೈಕ್ರೋ ಫೈನಾನ್ಸ್ ಗಳ ನಿಯಂತ್ರಣಕ್ಕೆ ಸುಗ್ರೀವಾಜ್ಞೆ: ರಾಜ್ಯಪಾಲರಿಗೆ ಸ್ಪಷ್ಟೀಕರಣ ಕಳುಹಿಸಲಿರುವ ಸರ್ಕಾರ
ಮುಂಬರುವ ಬಜೆಟ್ ಅಧಿವೇಶನದಲ್ಲಿ ಉಭಯ ಸದನಗಳಲ್ಲಿ ಸುಗ್ರೀವಾಜ್ಞೆಯನ್ನು ಮಂಡಿಸುವಂತೆ ಗೆಹ್ಲೋಟ್ ಸರ್ಕಾರಕ್ಕೆ ಸಲಹೆ ನೀಡಿದ್ದರು.

MUDA Case: ಸಿದ್ದರಾಮಯ್ಯ ಆಪ್ತ ಜಮೀರ್ ಅಹ್ಮದ್ ಗೂ ಶಾಕ್; ಕಾನೂನು ಕ್ರಮಕ್ಕೆ ರಾಜ್ಯಪಾಲರು ಸೂಚನೆ
ಮುಡಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಆದೇಶದ ಬಗ್ಗೆ ವಿವಾದಾತ್ಮಕವಾಗಿ ಮಾತನಾಡಿದ್ದ ಸಚಿವ ಜಮೀರ್ ಅಹಮ್ಮದ್ ಖಾನ್ ಇದೀಗ ಸಂಕಷ್ಟ ಎದುರಾಗಿದೆ.

ಮುಡಾ ಹಗರಣ: ರಾಜ್ಯಪಾಲರ ಪ್ರಾಸಿಕ್ಯೂಷನ್ ಪ್ರಶ್ನಿಸಿ ಸಿಎಂ ಅರ್ಜಿ; ಸೆಪ್ಟೆಂಬರ್ 2ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್
ಮುಡಾ ಹಗರಣದಲ್ಲಿ ತಮ್ಮ ವಿರುದ್ಧ ರಾಜ್ಯಪಾಲ ತಾವರ್ ಚಂದ್ ಗೆಹ್ಲೋಟ್ ಅವರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿದ್ದ ರಿಟ್ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಇದೀಗ ಮುಂದಿನ ವಿಚಾರಣೆಯನ್ನು ಸೆಪ್ಟೆಂಬರ್ 2ಕ್ಕೆ ಮುಂದೂಡಿದೆ.

1,494 ಕೋಟಿ ರೂ. ದುರ್ಬಳಕೆ: ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲ ಗೆಹ್ಲೋಟ್'ಗೆ ಮತ್ತೊಂದು ದೂರು
ರಾಜ್ಯ ಸರ್ಕಾರವು ಸಂವಿಧಾನದ 202, 205 ಮತ್ತು 206ನೇ ವಿಧಿಗಳ ಅಡಿಯ ನಿಬಂಧನೆಗಳನ್ನು ಉಲ್ಲಂಘಿಸಿದೆ. ಸಿಎಂ ಸಿದ್ದರಾಮಯ್ಯ ಅವರು 164ನೇ ವಿಧಿ ಅದರಲ್ಲೂ ವಿಶೇಷವಾಗಿ 163(3)ರ ಅಡಿಯಲ್ಲಿರುವ ನಿಬಂಧನೆಗಳನ್ನು ಉಲ್ಲಂಘಿಸಿದ್ದಾರೆ.

HDK ಗೆ ಸಂಕಷ್ಟ: ದೋಷಾರೋಪ ಪಟ್ಟಿ ಸಲ್ಲಿಸಲು ರಾಜ್ಯಪಾಲರಿಗೆ SIT ಪತ್ರ!
2007ರಲ್ಲಿ ಅಂದು ಮುಖ್ಯಮಂತ್ರಿಯಾಗಿದ್ದ ಎಚ್ ಡಿ ಕುಮಾರಸ್ವಾಮಿ ಅವರು ಗಣಿ ಮತ್ತು ಖನಿಜ ನಿಯಮಗಳನ್ನು ಉಲ್ಲಂಘಿಸಿ ಶ್ರೀ ಸಾಯಿ ವೆಂಕಟೇಶ್ವರ ಮಿನರಲ್ಸ್ ಕಂಪನಿಗೆ 550 ಎಕರೆ ವಿಸ್ತೀರ್ಣದ ಗಣಿ ಗುತ್ತಿಗೆ ಮಂಜೂರು ಮಾಡಿದ್ದಾರೆ.

