ರಾಜ್ಯಸಿರಿಧಾನ್ಯಕ್ಕೆ ಉತ್ತೇಜನ: ಸರ್ಕಾರಿ ಸಭೆ, ಸಮಾರಂಭಗಳಲ್ಲಿ ಸಿರಿಧಾನ್ಯದ ತಿಂಡಿ ತಿನಿಸು, ಪಾನೀಯ ಬಳಸಲು ಸುತ್ತೋಲೆ
ಸಿರಿಧಾನ್ಯಗಳ ಕೃಷಿಯು ಕೇವಲ ಸಾಂಪ್ರದಾಯಿಕ ಕೃಷಿಯಲ್ಲ. ಇದೊಂದು ವಿಶೇಷ ಮತ್ತು ವಿಶಿಷ್ಟ ಕೃಷಿಯಾಗಿದೆ. ಈ ನಿಟ್ಟಿನಲ್ಲಿ ಸಿರಿಧಾನ್ಯ ಬಳಕೆಗೆ ಉತ್ತೇಜನ ನೀಡುವ ಉದ್ದೇಶದಿಂದ ಸರ್ಕಾರದ ಎಲ್ಲಾ ಸಭೆ, ಸಮಾರಂಭಗಳಲ್ಲಿ ಸಿರಿಧಾನ್ಯ ಆಧಾರಿತ ತಿಂಡಿ ತಿನಿಸು, ಪಾನೀಯಗಳನ್ನು ಬಳಸುವಂತೆ ಸರ್ಕಾರ ಆದೇಶ ಹೊರಡಿಸಿದೆ.