ತುಂಗಭದ್ರಾ ಅಣೆಕಟ್ಟು

'ಕನ್ನಡ ಬಂದಿದ್ರೆ ಇನ್ನೂ ಚೆನ್ನಾಗಿ ಮಾತನಾಡುತ್ತಿದ್ದೆ': ಕಾಂಗ್ರೆಸ್ ಸಿಎಂಗಳ ಎದುರೇ ಪ್ರಧಾನಿ ಮೋದಿ ಗುಣಗಾನ ಮಾಡಿದ ಆಂಧ್ರ ಸಿಎಂ Chandrababu Naidu!
ಕನ್ನಡದಲ್ಲೇ ಭಾಷಣ ಆರಂಭಿಸಿದ ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು, ಕಾಂಗ್ರೆಸ್ ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್ ಮತ್ತು ರೇವಂತ್ ರೆಡ್ಡಿ ಎದುರೇ ಪ್ರಧಾನಿ ಮೋದಿ ಗುಣಗಾನ ಮಾಡಿದರು.

ತುಂಗಭದ್ರಾ ಡ್ಯಾಂಗೆ ಹೊಸ ಕಳೆ: ಆಧುನೀಕರಣ ಕಾರ್ಯ ಪೂರ್ಣ; ಉದ್ಘಾಟನೆಗೆ ಚಂದ್ರಬಾಬು ಸೇರಿ ಮೂರು ರಾಜ್ಯಗಳ ಸಿಎಂಗಳಿಗೆ ಆಹ್ವಾನ!
ಸುಮಾರು 57.8 ಕೋಟಿ ರೂ.ವೆಚ್ಚದ ಈ ಯೋಜನೆಯಲ್ಲಿ 52 ಕೋಟಿ ರೂ. ಕ್ರೆಸ್ಟ್ ಗೇಟ್‌ಗಳ ಆಧುನೀಕರಣಕ್ಕೆ ಹಾಗೂ 5.8 ಕೋಟಿ ರೂ. ಸರಪಳಿ ಬದಲಾವಣೆಗೆ ಮೀಸಲಿಡಲಾಗಿತ್ತು.

ತುಂಗಾಭದ್ರಾ ಕ್ರೆಸ್ಟ್ ಗೇಟ್ ನಿರ್ಮಾಣಕ್ಕೆ ನೀಡಿದ್ದ ಹಣ ವಾಪಸ್: ಸರ್ಕಾರದ ವಿರುದ್ಧ BJP ಆಕ್ರೋಶ
ರೈತರ ಹಿತದೃಷ್ಟಿಯಿಂದ ಕೇಂದ್ರ ಸರ್ಕಾರದ ನಿಯಂತ್ರಣದಲ್ಲಿರುವ ತುಂಗಭದ್ರಾ ಮಂಡಳಿ ಮೇ 2026ರೊಳಗೆ ಎಲ್ಲಾ ಹೊಸ ಗೇಟ್‌ಗಳನ್ನು ಅಳವಡಿಸಲು ಕ್ರಮ ಕೈಗೊಂಡಿದ್ದರೂ ರಾಜ್ಯ ಸರ್ಕಾರ ಹಣ ಬಿಡುಗಡೆ ಮಾಡಿಲ್ಲ.

ತುಂಗಭದ್ರಾ ಡ್ಯಾಂ ದುರಸ್ತಿ ನೆಪ: 2ನೇ ಬೆಳೆಗೆ ನೀರು ಬಿಡದೆ ರೈತರಿಗೆ ಅನ್ಯಾಯ, ಸರ್ಕಾರದ ವಿರುದ್ಧ BJP ಕಿಡಿ
33 ಕ್ರೆಸ್ಟ್ ಗೇಟ್‌ಗಳನ್ನು ವಿವಿಧ ಕಂಪನಿಗಳಿಗೆ ಹಂಚಿಕೆ ಮಾಡಿವೆ. ಆದರೆ, ಸಿಎಂ ಕುರ್ಚಿ ಕಿತ್ತಾಟದಲ್ಲಿ ಮುಳುಗಿರುವ ಕಾಂಗ್ರೆಸ್ ಸರ್ಕಾರ ಇಲ್ಲಿಯವರೆಗೆ ಕೇವಲ 16 ಗೇಟ್ ಗಳನ್ನಷ್ಟೇ ಅಳವಡಿಸಿದೆ.

ತುಂಗಭದ್ರಾ ಜಲಾಶಯದ ಆವರಣದಲ್ಲಿ ಜೋಡಿಗಳ ಪ್ರೀ-ವೆಡ್ಡಿಂಗ್ ಫೋಟೋಶೂಟ್: ಅಧಿಕಾರಿಗಳ ವಿರುದ್ಧ ಸ್ಥಳೀಯರು ಕಿಡಿ
ಕಾರನ್ನು ತುಂಗಭದ್ರಾ ಜಲಾಶಯದ ಮೇಲ್ಭಾಗದಲ್ಲಿ ತೆಗೆದುಕೊಂಡು ಹೋಗಿ ಅಲ್ಲಿ ಕಾರಿನ ಮೇಲೆ, ಕಾರಿನ ಮುಂಭಾಗ ಜೋಡಿಗಳ ಫೋಟೋಶೂಟ್ ಮಾಡಲಾಗಿದೆ.

ತುಂಗಭದ್ರಾ ಅಣೆಕಟ್ಟು ಗೇಟ್ ಅವಘಡ: ಜಲಾಶಯಕ್ಕೆ ತನಿಖಾ ತಂಡ ಭೇಟಿ, ಶೀಘ್ರದಲ್ಲೇ ವರದಿ ಸಲ್ಲಿಕೆ
ಕೇಂದ್ರ ಜಲ ಆಯೋಗದ (ಸಿಡಬ್ಲ್ಯುಸಿ) ಮಾಜಿ ಅಧ್ಯಕ್ಷ ಎ ಕೆ ಬಜಾಜ್ ಅವರು ತನಿಖಾ ತಂಡದ ಮುಖ್ಯಸ್ಥರಾಗಿದ್ದು, ಸೋಮವಾರ ಜಲಾಶಯಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಕ್ರೆಸ್ಟ್ ಗೇಟ್ ದುರಸ್ತಿ ನಂತರ ತುಂಗಭದ್ರಾ ಅಣೆಕಟ್ಟಿನಲ್ಲಿ ನೀರಿನ ಸಂಗ್ರಹ 7 ಟಿಎಂಸಿ ಅಡಿ ಏರಿಕೆ
ಖ್ಯಾತ ಅಣೆಕಟ್ಟೆ ತಜ್ಞ, ನಿವೃತ್ತ ಎಂಜಿನಿಯರ್ ಕನ್ನಯ್ಯ ನಾಯ್ಡು ನೇತೃತ್ವದ ತಜ್ಞರ ತಂಡ ಕ್ರೆಸ್ಟ್ ಗೇಟ್ ಸಂಖ್ಯೆ 19ಕ್ಕೆ ಐದು ಸ್ಟಾಪ್‌ಲಾಗ್‌ಗಳನ್ನು ಯಶಸ್ವಿಯಾಗಿ ಅಳವಡಿಸಿದ್ದರು. ಇದಾದ, ಎರಡು ವಾರಗಳಲ್ಲಿ ಅಣೆಕಟ್ಟೆ ಮತ್ತೆ ಭರ್ತಿಯಾಗಲಿದೆ ಎಂದು ಅವರು ಭರವಸೆ ನೀಡಿದ್ದರು.

TB Dam: ಹೊಸ ಕ್ರಸ್ಟ್ ಗೇಟ್ ಅಳವಡಿಕೆ ಕೆಲಸ ಆರಂಭ; ಪೂಜೆ ನೆರವೇರಿಸಿದ ಸಚಿವ ಜಮೀರ್ ಅಹ್ಮದ್
ಹೊಸ ಕ್ರೆಸ್ಟ್ ಗೇಟ್ ಅಳವಡಿಸುವ ಕಾಮಗಾರಿ ಇಂದು ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ನೇತೃತ್ವದಲ್ಲಿ ಆರಂಭವಾಗಿದೆ. ಕಳೆದ ಭಾನುವಾರ 19ನೇ ಕ್ರಸ್ಟ್ ಗೇಟ್ ಮುರಿದಿತ್ತು.

ತುಂಗಭದ್ರಾ ಡ್ಯಾಂ ಗೇಟ್ ಮುರಿದ ವಿಚಾರದಲ್ಲಿ ರಾಜಕೀಯ ಮಾಡುವುದಿಲ್ಲ, ಯಾರನ್ನು ದೂಷಿಸುವುದೂ ಇಲ್ಲ, ರೈತರ ಹಿತ ಮುಖ್ಯ: ಸಿಎಂ ಸಿದ್ದರಾಮಯ್ಯ
ಹವಾಮಾನ ಮುನ್ಸೂಚನೆಯಂತೆ ತುಂಗಭದ್ರಾ ಜಲಾಶಯದಿಂದ ಪೋಲಾಗಿರುವ ನೀರು ಮತ್ತೆ ತುಂಬಿಕೊಳ್ಳಲಿದೆ. ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಲಾಗುವುದು ಎಂದರು.

