ತುರ್ತು ಬಳಕೆ

ಕೋವಿಡ್ ವಿರುದ್ಧ ಹೋರಾಡಲು ಭಾರತಕ್ಕೆ ಮತ್ತಷ್ಟು ಬಲ: ಜಾನ್ಸನ್ ಆ್ಯಂಡ್ ಜಾನ್ಸನ್ ಸಿಂಗಲ್ ಡೋಸ್ ಲಸಿಕೆ ತುರ್ತು ಬಳಕೆಗೆ ಕೇಂದ್ರ ಸರ್ಕಾರ ಒಪ್ಪಿಗೆ
ಕೋವಿಡ್ ವಿರುದ್ಧ ಹೋರಾಡಲು ಅಮೆರಿಕಾ ಮೂಲದ ಜಾನ್ಸನ್ ಆ್ಯಂಡ್ ಜಾನ್ಸನ್ ಕಂಪನಿ ಅಭಿವೃದ್ಧಿಪಡಿಸಿರುವ ಸಿಂಗಲ್ ಡೋಸ್ ಕೋವಿಡ್ ಲಸಿಕೆ ತುರ್ತು ಬಳಕೆಗೆ ಭಾರತ ಸರ್ಕಾರ ಒಪ್ಪಿಗೆ ನೀಡಿದೆ ಎಂದು ಶನಿವಾರ ತಿಳಿದುಬಂದಿದೆ.

ಸ್ಪುಟ್ನಿಕ್-ಲೈಟ್ ಸಿಂಗಲ್ ಡೋಸ್ ಕೋವಿಡ್ ಲಸಿಕೆ ತುರ್ತು ಬಳಕೆಗೆ ಡಿಸಿಜಿಐ ಅನುಮೋದನೆ ನಿರಾಕರಣೆ!
ಸಿಂಗಲ್ ಡೋಸ್ ಕೋವಿಡ್ ಲಸಿಕೆ ಸ್ಪುಟ್ನಿಕ್ -ಲೈಟ್ ತುರ್ತು ಬಳಕೆಗೆ ಭಾರತೀಯ ಔಷಧ ನಿಯಂತ್ರಣ ಪ್ರಾಧಿಕಾರ ಅನುಮೋದನೆಯನ್ನು ನಿರಾಕರಿಸಿದ್ದು, ದೇಶದಲ್ಲಿ ರಷ್ಯಾ ನಿರ್ಮಿತ ಲಸಿಕೆಯ ಮೂರನೇ ಹಂತದ ಪ್ರಯೋಗದ ಅಗತ್ಯವನ್ನು ತಳ್ಳಿ ಹಾಕಿದೆ.

ಕೋವಿಡ್-19: 'ಕೋವ್ಯಾಕ್ಸಿನ್' ತುರ್ತು ಬಳಕೆಗೆ ಅಮೆರಿಕಾ ಎಫ್ ಡಿಎ ಅನುಮತಿ ನಿರಾಕರಣೆ!
ಅಮೆರಿಕದಲ್ಲಿ ತುರ್ತು ಬಳಕೆಗೆ ಅನುಮೋದನೆ ಪಡೆಯಲು ಪ್ರಯತ್ನಿಸುತ್ತಿರುವ ಭಾರತ್ ಬಯೋಟೆಕ್‌ನ ಕೋವ್ಯಾಕ್ಸಿನ್ ಲಸಿಕೆಗೆ ಹಿನ್ನಡೆಯುಂಟಾಗಿದೆ. ಅಮೆರಿಕಾದ ಎಫ್ಡಿಎ (ಆಹಾರ ಮತ್ತು ಔಷಧ ಆಡಳಿತ) ಕೋವ್ಯಾಕ್ಸಿನ್ ಲಸಿಕೆಯನ್ನು ತಿರಸ್ಕರಿಸಿದೆ.

