ತೆರಿಗೆ ವಂಚನೆ

ತೆರಿಗೆ ವಂಚನೆ ಆರೋಪ: 5 ಲಕ್ಷ ಆಸ್ತಿ ಮಾಲೀಕರಿಗೆ BBMP ನೋಟಿಸ್
ಡ್ರೋನ್ ಸಮೀಕ್ಷೆಗಳು, ಅಧಿಕಾರಿಗಳ ಭೇಟಿ ಮತ್ತು ಇತರ ವಿಧಾನಗಳ ಮೂಲಕ ಸುಮಾರು 5 ಲಕ್ಷ ಆಸ್ತಿಗಳಲ್ಲಿ ಕಾನೂನು ಉಲ್ಲಂಘನೆಗಳನ್ನು ಪಾಲಿಕೆ ಪತ್ತೆಹಚ್ಚಿದೆ.

GST: 32 ಸಾವಿರ ಕೋಟಿ ತೆರಿಗೆ ವಂಚನೆ ಆರೋಪ; Infosysಗೆ ಐಟಿ ಇಲಾಖೆ ನೋಟಿಸ್
ರಫ್ತು ಮಾಡಲಾದ ಉತ್ಪನ್ನಗಳ ಇನ್‌ವಾಯ್ಸ್‌ನಲ್ಲಿ ಇನ್ಫೋಸಿಸ್ ಘಟಕಗಳ ಖರ್ಚು ವೆಚ್ಚಗಳನ್ನೂ ನಮೂದಿಸಿರುವುದು ಜಿಎಸ್‌ಟಿ ಗುಪ್ತಚರ ವಿಭಾಗದ ಕಣ್ಣು ಕೆಂಪಗಾಗಿಸಿದೆ.

ಬೆಳಗಾವಿ: ನಕಲಿ ದಾಖಲೆ ಸೃಷ್ಟಿಸಿ 132 ಕೋಟಿ ರೂ. GST ವಂಚನೆ; ಆರೋಪಿ ಬಂಧನ
ಫೆಡರಲ್ ಲಾಜಿಸ್ಟಿಕ್ಸ್ ಮಾಲೀಕ ನಕೀಬ್ ನಜೀಬ್ ಮುಲ್ಲಾ ಬಂಧಿತ ಆರೋಪಿ. ರೂ.23.82 ಕೋಟಿಯ ನಕಲಿ ಇನ್‌ಪುಟ್ ಟ್ಯಾಕ್ಟ್ ಕ್ರೆಡಿಟ್ ಒಳಗೊಂಡ ರೂ.132 ಕೋಟಿ ಮೌಲ್ಯದ ನಕಲಿ ಜಿಎಸ್‌ಟಿ ಇನ್‌ವಾಯ್ಸ್ ರಾಕೆಟ್‌ಗಳನ್ನು ಸೃಷ್ಟಿಸಿದ್ದ. ಗ್ರಾಹಕರಿಂದ ಹಣ ಸಂಗ್ರಹಿಸಿ ಅದನ್ನು ಜಿಎಸ್‌ಟಿ ಕಚೇರಿಗೆ ಕಟ್ಟದೇ ವಂಚಿಸಿದ್ದ.

ಚುನಾವಣಾ ಕರ್ತವ್ಯದ ಬಳಿಕ ಸ್ವಸ್ಥಾನಕ್ಕೆ ಮರಳಿದ ಅಧಿಕಾರಿಗಳು: ತೆರಿಗೆ ವಂಚಕರ ವಿರುದ್ಧ ಕ್ರಮಕ್ಕೆ BBMP ಮುಂದು!
ಲೋಕಸಭಾ ಚುನಾವಣೆ ಚುನಾವಣಾ ಕರ್ತವ್ಯ ಪೂರ್ಣಗೊಳಿಸಿದ ಬಳಿಕ ಸ್ವಸ್ಥಾನಕ್ಕೆ ಬಿಬಿಎಂಪಿ ಅಧಿಕಾರಿಗಳು ಮರಳಿದ್ದು, ತೆರಿಗೆ ವಂಚಕರತ್ತ ಗಮನ ಹರಿಸಿದ್ದಾರೆ.

ತೆರಿಗೆ ವಂಚನೆ ಆರೋಪ: ಬೆಂಗಳೂರು ರೇಸ್ ಕೋರ್ಸ್ ವಿರುದ್ಧದ ಪ್ರಕರಣ ರದ್ಧತಿಗೆ ಹೈಕೋರ್ಟ್ ನಕಾರ
ಬೆಂಗಳೂರು ಟರ್ಫ್ ಕ್ಲಬ್ (ರೇಸ್ ಕೋರ್ಸ್)ನಲ್ಲಿ ಸೂಕ್ತ ದಾಖಲೆ ಮತ್ತು ರಿಜಿಸ್ಟರ್ ನಿರ್ವಹಿಸದೆ ಅನಧಿಕೃತವಾಗಿ ಕುದುರೆ ಪಂದ್ಯಗಳಿಗೆ ಬೆಟ್ಟಿಂಗ್ ಆಯೋಜಿಸಿ ಪಂಟರ್ಗಳಿಂದ ಹಣ ಸಂಗ್ರಹಿಸಿ ಜಿಎಸ್ ಟಿ ಮತ್ತು ಟಿಡಿಎಸ್ ಕಟ್ಟದ ಪ್ರಕರಣವನ್ನು ರದ್ದುಗೊಳಿಸಲು ಹೈಕೋರ್ಟ್ ನಿರಾಕರಿಸಿದೆ

ತೆರಿಗೆ ವಂಚನೆ ಪ್ರಕರಣ: ಬೆಂಗಳೂರಿನಲ್ಲಿ ಮತ್ತೆ 10ಕ್ಕೂ ಹೆಚ್ಚು ಕಡೆ ಐಟಿ ದಾಳಿ, ಅಧಿಕಾರಿಗಳಿಂದ ತೀವ್ರ ಶೋಧ
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮತ್ತೆ ಐಟಿ ದಾಳಿಯಾಗಿದೆ. ತೆರಿಗೆ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುವಾರ ಬೆಳ್ಳಂಬೆಳಗ್ಗೆ ನಗರದ 10ಕ್ಕೂ ಹೆಚ್ಚು ಕಡೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ತೀವ್ರ ಶೋಧ ನಡೆಸುತ್ತಿದ್ದಾರೆ.

ತೆರಿಗೆ ವಂಚನೆ ಮಾಡುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಿ: ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ
ತೆರಿಗೆ ವಂಚನೆ, ತೆರಿಗೆ ಸೋರಿಕೆ, ತೆರಿಗೆ ಕಳ್ಳತನ ಪ್ರಕರಣಗಳ ಬಗ್ಗೆ ಹೆಚ್ಚಿನ ನಿಗಾ ವಹಿಸಿ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶಿಸಿದರು.

ಬೆಂಗಳೂರು: ಉದ್ಯಮಿಯ ವಿವರ ಬಳಸಿ ರಾಜ್ಯ ಸರ್ಕಾರಕ್ಕೆ ತೆರಿಗೆ ವಂಚಿಸಿದ ನಾಲ್ವರ ಬಂಧನ
ಉದ್ಯಮಿಯೊಬ್ಬರ ಪಾನ್ ಕಾರ್ಡ್ ಮತ್ತು ಸರಕು ಮತ್ತು ಸೇವಾ ತೆರಿಗೆ(ಜಿಎಸ್‌ಟಿ) ಸಂಖ್ಯೆಯನ್ನು ಅವರಿಗೆ ತಿಳಿಯದಂತೆ ದುರ್ಬಳಕೆ ಮಾಡಿಕೊಂಡು ತೆರಿಗೆ ವಂಚಿಸಿ ಸರ್ಕಾರಕ್ಕೆ ನಷ್ಟ ಉಂಟು ಮಾಡಿದ್ದ ನಾಲ್ವರನ್ನು ಸೈಬರ್ ಕ್ರೈಂ ಠಾಣೆಯ...

ಬೃಹತ್ ಐಟಿ ದಾಳಿ; 56 ಕೋಟಿ ರೂ. ಕ್ಯಾಶ್, 32 ಕೆಜಿ ಚಿನ್ನ, 16 ಕೋಟಿ ರೂ. ಮೌಲ್ಯದ ವಜ್ರ ಸೇರಿ 390 ಕೋಟಿ ರೂ. ಅಕ್ರಮ ಆಸ್ತಿ ಪತ್ತೆ!
ಮಹಾರಾಷ್ಟ್ರದಲ್ಲಿ ಬೃಹತ್ ಐಟಿ ದಾಳಿಯಾಗಿದ್ದು, 56 ಕೋಟಿ ಕ್ಯಾಶ್, 32 ಕೆಜಿ ಚಿನ್ನ, 16 ಕೋಟಿ ಮೌಲ್ಯದ ವಜ್ರ ಸೇರಿ 390 ಕೋಟಿ ಅಕ್ರಮ ಆಸ್ತಿಯನ್ನು ತೆರಿಗೆ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

