ದೇಶಬಿಜೆಪಿಗೆ ಹಿರಿಯ ನಟಿ ವಿಜಯಶಾಂತಿ ಗುಡ್ ಬೈ; ಕಾಂಗ್ರೆಸ್ ಸೇರುವ ಸಾಧ್ಯತೆ!
ತೆಲಂಗಾಣ ವಿಧಾನಸಭಾ ಚುನಾವಣೆಗೆ ಕೆಲ ದಿನಗಳು ಬಾಕಿಯಿರುವಂತೆಯೇ ಮಾಜಿ ಸಂಸದೆ ಹಾಗೂ ಹಿರಿಯ ನಟಿ ವಿಜಯಶಾಂತಿ ಬಿಜೆಪಿಗೆ ಗುಡ್ ಬೈ ಹೇಳಿದ್ದಾರೆ. ಶುಕ್ರವಾರ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.