ತೆಲಂಗಾಣ ವಿಧಾನಸಭೆ ಚುನಾವಣೆ

ತೆಲಂಗಾಣ ಗೆಲುವು: ಸಿಎಂ ಹುದ್ದೆ ಕನಸು ಕಾಣುತ್ತಿರುವ ಡಿ ಕೆ ಶಿವಕುಮಾರ್ ಗೆ ಹೆಚ್ಚಿದ 'ಕೈ' ಬಲ
ಕರ್ನಾಟಕ ಮತ್ತು ತೆಲಂಗಾಣ ವಿಧಾನಸಭೆ ಚುನಾವಣೆಯಲ್ಲಿ ಸತತ ಗೆಲುವು ಸಾಧಿಸಿ, ಎರಡೂ ರಾಜ್ಯಗಳಲ್ಲಿ ಪಕ್ಷದ ಗೆಲುವಿಗೆ ಪ್ರಮುಖ ಕಾರಣಕರ್ತರಾದ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಭವಿಷ್ಯದಲ್ಲಿ ಕರ್ನಾಟಕದಲ್ಲಿ ಪಕ್ಷದಲ್ಲಿ ಉನ್ನತ ಹುದ್ದೆ ವಹಿಸಲು ತಮ್ಮ ಶಕ್ತಿ, ಸಾಮರ್ಥ್ಯವನ್ನು ಹೆಚ್ಚಿಸಿಕೊಂಡಿದ್ದಾರೆ ಎನ್ನಬಹುದು.

ತೆಲಂಗಾಣ ವಿಧಾನಸಭೆ ಚುನಾವಣೆ: ಮತದಾನದ ವೇಳೆ ಇಬ್ಬರು ಮತದಾರರು ಸಾವು
ತೆಲಂಗಾಣದ ಆದಿಲಾಬಾದ್ ಪಟ್ಟಣದಲ್ಲಿ ಗುರುವಾರ ವಿಧಾನಸಭಾ ಚುನಾವಣೆಯ ಮತದಾನದ ವೇಳೆ ಇಬ್ಬರು ಮತದಾರರು ಸಾವಿಗೀಡಾಗಿದ್ದಾರೆ. ಮತಗಟ್ಟೆಯಲ್ಲೇ ಹಿರಿಯ ನಾಗರಿಕರಿಬ್ಬರೂ ಅಸ್ವಸ್ಥರಾಗಿದ್ದಾರೆ.

ತೆಲಂಗಾಣ ಚುನಾವಣಾ ಪ್ರಚಾರದಲ್ಲಿ 'ಡೀಪ್‌ಫೇಕ್' ತಂತ್ರಜ್ಞಾನ; ಕಾಂಗ್ರೆಸ್ ವಿರುದ್ಧ ಬಿಆರ್‌ಎಸ್ ದೂರು
ತೆಲಂಗಾಣದಲ್ಲಿ ಬಿಆರ್‌ಎಸ್ ಅಧ್ಯಕ್ಷ ಕೆ ಚಂದ್ರಶೇಖರ್ ರಾವ್ ಮತ್ತು ಇತರ ಪ್ರಮುಖ ನಾಯಕರು ಹಾಗೂ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ಪಕ್ಷದ ಅಭ್ಯರ್ಥಿಗಳನ್ನು ಗುರಿಯಾಗಿಸಿಕೊಂಡು ಕಾಂಗ್ರೆಸ್ 'ಡೀಪ್‌ಫೇಕ್' ತಂತ್ರಜ್ಞಾನವನ್ನು ಬಳಸಿ ನಕಲಿ ಸುದ್ದಿಗಳನ್ನು ಸೃಷ್ಟಿಸಿದೆ ಎಂದು ಆರೋಪಿಸಿ ಬಿಆರ್‌ಎಸ್ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.

ಕರ್ನಾಟಕದ ಚುನಾವಣಾ ಫಲಿತಾಂಶ ತೆಲಂಗಾಣದಲ್ಲೂ ಪುನರಾವರ್ತನೆಯಾಗಲಿದೆ: ರೇವಂತ್ ರೆಡ್ಡಿ
ಕರ್ನಾಟಕದ ಚುನಾವಣಾ ಫಲಿತಾಂಶ ತೆಲಂಗಾಣದಲ್ಲೂ ಪುನರಾವರ್ತನೆಯಾಗಲಿದೆ ಎಂದು ತೆಲಂಗಾಣ ಕಾಂಗ್ರೆಸ್ ಅಧ್ಯಕ್ಷ ರೇವಂತ್ ರೆಡ್ಡಿ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ಭಾರಿ ಭದ್ರತೆಯ ನಡುವೆ ರಾಜ್ಯದ ವಿವಿಧ ಮತಗಟ್ಟೆಗಳಲ್ಲಿ ಮತದಾನ ನಡೆಯುತ್ತಿದೆ.

ತೆಲಂಗಾಣ ಚುನಾವಣೆ: ಮಾದರಿ ನೀತಿ ಸಂಹಿತೆ ಉಲ್ಲಂಘನೆ; ಬಿಆರ್‌ಎಸ್ ಎಂಎಲ್ಸಿ ಕೆ ಕವಿತಾ ವಿರುದ್ಧ ದೂರು ದಾಖಲು!
ಮತದಾನದ ದಿನದಂದು 'ಮತ ಕೇಳುವ' ಮೂಲಕ ಮಾದರಿ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿ ತೆಲಂಗಾಣ ಕಾಂಗ್ರೆಸ್ ನಾಯಕ ಜಿ ನಿರಂಜನ್ ಅವರು ಬಿಆರ್‌ಎಸ್ ಎಂಎಲ್ಸಿ ಕೆ ಕವಿತಾ ವಿರುದ್ಧ ಗುರುವಾರ ದೂರು ದಾಖಲಿಸಿದ್ದಾರೆ.

ತೆಲಂಗಾಣ ಪತ್ರಿಕೆಗಳಲ್ಲಿ ಕಾಂಗ್ರೆಸ್ ಸರ್ಕಾರದ ಖಾತರಿ ಯೋಜನೆಗಳ ಜಾಹೀರಾತು: ನಡೆ ಸಮರ್ಥಿಸಿಕೊಂಡ ಸಿಎಂ, ಡಿಸಿಎಂ
ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಭಾರತೀಯ ಚುನಾವಣಾ ಆಯೋಗ (ECI) ನೋಟಿಸ್ ನೀಡಿದ ನಂತರವೂ ವಿಧಾನಸಭೆ ಚುನಾವಣೆ ನಡೆಯಲಿರುವ ತೆಲಂಗಾಣದಲ್ಲಿ ತನ್ನ ಖಾತರಿ ಯೋಜನೆಗಳ ಜಾಹೀರಾತು ನೀಡಿದ ರಾಜ್ಯ ಸರ್ಕಾರದ ನಿರ್ಧಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಮರ್ಥಿಸಿಕೊಂಡಿದ್ದಾರೆ.

ತೆಲಂಗಾಣ: ಕೆಸಿಆರ್‌ಗೆ 4 ಸಾವಿರ ರೂ. ವೃದ್ಧಾಪ್ಯ ವೇತನ, ಜೈಲಿನಲ್ಲಿ 2BHK ಮನೆ ನೀಡಲಾಗುವುದು- ರೇವಂತ್ ರೆಡ್ಡಿ
ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಅವರಿಗೆ 4,000 ರೂ. ವೃದ್ಧಾಪ್ಯ ವೇತನ ನೀಡಲಾಗುವುದು ಮತ್ತು ಚೆರ್ಲಪಲ್ಲಿ ಕೇಂದ್ರ ಕಾರಾಗೃಹದಲ್ಲಿ ಅವರಿಗೆ 2 BHK ಮನೆ ನಿರ್ಮಿಸಿಕೊಡುವುದಾಗಿ ಟಿಪಿಸಿಸಿ ಮುಖ್ಯಸ್ಥ ಎ ರೇವಂತ್ ರೆಡ್ಡಿ ಗುರುವಾರ ಹೇಳಿದ್ದಾರೆ.

ತೆಲಂಗಾಣ ಚುನಾವಣೆ: ಕರ್ನಾಟಕ ಸಿಎಂ ಸಿದ್ದರಾಮಯ್ಯಗೆ ಕೆ ಚಂದ್ರಶೇಖರ್ ರಾವ್ ಟೀಕಿಸುವ ಹಕ್ಕಿಲ್ಲ- ಕೆ ಕವಿತಾ
ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಅವರನ್ನು ಟೀಕಿಸುವ ಯಾವುದೇ ಅರ್ಹತೆ ಹೊಂದಿಲ್ಲ. ಕಾಂಗ್ರೆಸ್ ಪಕ್ಷವು ತನ್ನ ರಾಜ್ಯದಲ್ಲಿ 'ವಿಫಲವಾಗುತ್ತಿದೆ' ಎಂದು ಬಿಆರ್‌ಎಸ್ ಎಂಎಲ್ಸಿ ಕೆ ಕವಿತಾ ಶುಕ್ರವಾರ ಆರೋಪಿಸಿದ್ದಾರೆ.

ತೆಲಂಗಾಣ ವಿಧಾನಸಭೆ ಚುನಾವಣೆ: ಜ್ಯುಬಿಲಿ ಹಿಲ್ಸ್ ನಿಂದ ಅಜರ್ ಸ್ಪರ್ಧೆ; ಮಾಜಿ ಕ್ರಿಕೆಟಿಗನ ಮುಂದಿವೆ ಸಾಲು ಸಾಲು ಸಮಸ್ಯೆ!
ತೆಲಂಗಾಣ ವಿಧಾನಸಭೆ ಚುನಾವಣೆಗೆ ಜುಬ್ಲಿ ಹಿಲ್ಸ್ ಕ್ಷೇತ್ರಕ್ಕೆ ಭಾರತೀಯ ಕ್ರಿಕೆಟ್ ತಂಡದ ಮಾಜಿ ನಾಯಕ ಮೊಹಮ್ಮದ್ ಅಜರುದ್ದೀನ್ ಅವರನ್ನು ಕಾಂಗ್ರೆಸ್ ಕಣಕ್ಕಿಳಿಸಿದೆ. ಹೀಗಾಗಿ ಜುಬ್ಲಿ ಹಿಲ್ಸ್ ವಿಧಾನಸಭಾ ಕ್ಷೇತ್ರವು ಹೈ-ಪ್ರೊಫೈಲ್ ಕ್ಷೇತ್ರವಾಗಿ ಮಾರ್ಪಟ್ಟಿದೆ.

