ರಾಜ್ಯವೃಷಭಾವತಿ ನದಿ ನೀರನ್ನು ಮೂರು ಹಂತಗಳಲ್ಲಿ ಸಂಸ್ಕರಿಸಿ ಕೆರೆಗಳಿಗೆ ತುಂಬಿಸುವ ಯೋಜನೆ ಅನುಷ್ಠಾನ: ಸಿ.ಪಿ.ಯೋಗೇಶ್ವರ್
ವೃಷಭಾವತಿ ನದಿಯ ಕೊಳಚೆ ನೀರನ್ನು ಮುಂದಿನ 5 ವರ್ಷಗಳಲ್ಲಿ ರೂ.1500 ಕೋಟಿ ರೂಪಾಯಿ ವೆಚ್ಚದಲ್ಲಿ ಮೂರನೇ ಹಂತದಲ್ಲಿ ಸಂಸ್ಕರಿಸಿ ಕೃಷಿ ಹಾಗೂ ಕೆರೆಗೆ ನೀರು ತುಂಬಿಸುವ ಯೋಜನೆಯನ್ನು ಅನುಷ್ಠಾನಗೊಳಿಸುವುದಾಗಿ ಪ್ರವಾಸೋದ್ಯಮ, ಪರಿಸರ ಹಾಗೂ ಜೀವಿಶಾಸ್ತ್ರ ಸಚಿವ ಸಿ.ಪಿ.ಯೋಗೇಶ್ವರ್ ತಿಳಿಸಿದ್ದಾರೆ.