ದೇಶಕೇರಳ: ಪೊಲೀಸ್ ಠಾಣೆಯಲ್ಲಿ ವ್ಯಕ್ತಿ ಸಾವು; ಸರ್ಕಾರದ ವಿರುದ್ಧ ಭುಗಿಲೆದ್ದ ಆಕ್ರೋಶ!
ರಸ್ತೆ ತಪಾಸಣೆ ವೇಳೆ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ರೊಬ್ಬರು ಹೆಲ್ಮೆಟ್ನಿಂದ ಹೊಡೆದಿದ್ದರಿಂದ ಇಬ್ಬರು ಮಕ್ಕಳ ತಂದೆಯೊಬ್ಬರು ಶನಿವಾರ ರಾತ್ರಿ ತ್ರಿಪುಣಿತುರಾ ಹಿಲ್ ಪ್ಯಾಲೇಸ್ ಠಾಣೆಯಲ್ಲಿ ಸಾವನ್ನಪ್ಪಿದ್ದಾರೆ. ಇದು ಕೇರಳ ರಾಜ್ಯವನ್ನು ಬೆಚ್ಚಿ ಬೀಳಿಸಿದೆ. ಮೃತ ವ್ಯಕ್ತಿಯನ್ನು ಇರುಪನಂ ಮೂಲದ ಮನೋಹರನ್ ಎಂದು ಗುರುತಿಸಲಾಗಿದೆ.