ಥಾವರಚಂದ್ ಗೆಹ್ಲೋಟ್

ಬಿ ನಾಗೇಂದ್ರ ರಾಜೀನಾಮೆ ಅಂಗೀಕರಿಸಿದ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್; ಕೊನೆಗೂ ಊಹಾಪೋಹಗಳಿಗೆ ತೆರೆ!
ಈ ಹಗರಣದಲ್ಲಿ ತಮ್ಮ ಯಾವುದೇ ಪಾತ್ರವಿಲ್ಲ ಎಂದು ಪ್ರತಿಪಾದಿಸಿದ ನಾಗೇಂದ್ರ, ಪಕ್ಷ ಮತ್ತು ಸರ್ಕಾರಕ್ಕೆ ಮುಜುಗರವಾಗುವುದನ್ನು ತಪ್ಪಿಸಲು ತಾವಾಗಿಯೇ ರಾಜೀನಾಮೆ ನೀಡಿರುವುದಾಗಿ ತಿಳಿಸಿದರು.

ಆಗಸ್ಟ್ 16 ರಿಂದ 18ರವರೆಗೆ ಸಾರ್ವಜನಿಕ ವೀಕ್ಷಣೆಗಾಗಿ ಲೋಕ ಭವನ ಮುಕ್ತ; ತಿಂಡಿ-ತಿನಿಸು ಸೇರಿದಂತೆ ನಿಷೇಧಿತ ವಸ್ತುಗಳ ಪಟ್ಟಿ ಇಲ್ಲಿದೆ...
ಪ್ರತಿಯೊಬ್ಬ ಸಂದರ್ಶಕರು ಆಧಾರ್ ಕಾರ್ಡ್‌ನಂತಹ ಸರ್ಕಾರದಿಂದ ನೀಡಲಾದ ಮಾನ್ಯ ಗುರುತಿನ ಚೀಟಿಯನ್ನು ಕಡ್ಡಾಯವಾಗಿ ಹೊಂದಿರಬೇಕು ಮತ್ತು ಪರಿಶೀಲನೆಗಾಗಿ ಪ್ರವೇಶ ದ್ವಾರದಲ್ಲಿ ಭದ್ರತಾ ಸಿಬ್ಬಂದಿಗೆ ತೋರಿಸಬೇಕು.

ರಾಜ್ಯಪಾಲರ ಫೋನ್ ಕರೆಗಳನ್ನು ಎಂದಿಗೂ ಕದ್ದಾಲಿಸಿಲ್ಲ: ಬಿಜೆಪಿ ಆರೋಪ ತಳ್ಳಿಹಾಕಿದ ಗೃಹ ಸಚಿವ ಜಿ ಪರಮೇಶ್ವರ
ಸಚಿವ ಎಚ್.ಕೆ. ಪಾಟೀಲ್ ಹೇಳಿಕೆಗೆ ಪ್ರತಿಕ್ರಿಯಿಸಿದ್ದ ಬಿಜೆಪಿ, ಸಚಿವರ ಹೇಳಿಕೆಯು ರಾಜ್ಯಪಾಲರ ಫೋನ್‌ಗಳನ್ನು ಕದ್ದಾಲಿಸಲಾಗುತ್ತಿದೆ ಎಂಬುದನ್ನು ಸೂಚಿಸುತ್ತದೆ ಎಂದು ಆರೋಪಿಸಿತ್ತು.

ರಾಜ್ಯಪಾಲರಿಗೆ ಅಪಮಾನ: ಕಾಂಗ್ರೆಸ್ ಶಾಸಕರ ಅಮಾನತಿಗೆ ಒತ್ತಾಯಿಸಿ ಬಿಜೆಪಿ, ಜೆಡಿಎಸ್ ಪ್ರತಿಭಟನೆ
ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ವೈಫಲ್ಯಗಳು ಮತ್ತು ಮಹಿಳೆಯರಿಗೆ ಅಸಮರ್ಪಕ ಭದ್ರತೆ ಕುರಿತು ರಾಜ್ಯ ಸರ್ಕಾರವನ್ನು ದೂಷಿಸಿದರು.

ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಸೋಗಿನಲ್ಲಿ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್‌ಗೆ ಕರೆ; ವಂಚನೆಗೆ ಯತ್ನ
ಕರೆ ಮಾಡಿದ ವ್ಯಕ್ತಿ ತಾನು ಧರ್ಮೇಂದ್ರ ಪ್ರಧಾನ್ ಎಂದು ಪರಿಚಯಿಸಿಕೊಂಡಿದ್ದಾನೆ ಮತ್ತು ಯಾವುದೋ ಕೆಲಸಕ್ಕೆ ಸಂಬಂಧಿಸಿದಂತೆ ಸಹಾಯ ಕೋರಿದ್ದಾನೆ.

International Yoga Day: ರಾಜ್ಯಪಾಲ ಗೆಹ್ಲೋಟ್, ಆರೋಗ್ಯ ಸಚಿವರಿಂದ ಬೆಂಗಳೂರಿನಲ್ಲಿ ಯೋಗ ಪ್ರದರ್ಶನ
'ಒಂದು ಭೂಮಿ, ಒಂದು ಆರೋಗ್ಯಕ್ಕಾಗಿ ಯೋಗ' ಎಂಬ ವಿಷಯದ ಅಡಿಯಲ್ಲಿ ಕೇಂದ್ರ ಆಯುಷ್ ಸಚಿವಾಲಯದ 'ಯೋಗ ಸಂಗಮ' ಉಪಕ್ರಮಕ್ಕೆ ಅನುಗುಣವಾಗಿ ಸಾಮೂಹಿಕವಾಗಿ ಯೋಗ ಪ್ರದರ್ಶನ ಮಾಡಿದ್ದು ಕಂಡುಬಂತು.

ಮುಡಾ ನಿವೇಶನ ಹಂಚಿಕೆಯಲ್ಲಿ ಸಿದ್ದರಾಮಯ್ಯ ಪಾತ್ರದ ಬಗ್ಗೆ ರಾಜ್ಯಪಾಲರು ಉಲ್ಲೇಖಿಸಿಲ್ಲ: ಹೈಕೋರ್ಟ್‌ನಲ್ಲಿ ಸಿಂಘ್ವಿ
ಹೈಕೋರ್ಟ್‌ನಲ್ಲಿ ಗುರುವಾರ ಸಿಎಂ ಸಿದ್ದರಾಮಯ್ಯ ಅವರ ಪರವಾಗಿ ವಾದ ಮಂಡಿಸಿದ ಹಿರಿಯ ವಕೀಲರಾದ ಅಭಿಷೇಕ್ ಮನು ಸಿಂಘ್ವಿ ಅವರು, ನಿವೇಶನ ಹಂಚಿಕೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪಾತ್ರದ ಬಗ್ಗೆ ರಾಜ್ಯಪಾಲರು ಉಲ್ಲೇಖಿಸಿಲ್ಲ ಎಂದರು.

ಕಾವೇರಿ ವಿಚಾರವಾಗಿ ವಿಧಾನಸಭೆ ವಿಶೇಷ ಅಧಿವೇಶನಕ್ಕೆ ಕರ್ನಾಟಕ ರೈತ ಸಂಘಗಳು ಒತ್ತಾಯ; ರಾಜ್ಯಪಾಲರಿಗೆ ಮನವಿ
ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ರೈತ ಸಂಘದ ಮುಖಂಡರು ಶುಕ್ರವಾರ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರನ್ನು ಭೇಟಿ ಮಾಡಿ, ಕಾವೇರಿ ವಿಚಾರವಾಗಿ ಚರ್ಚಿಸಲು ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ ಕರೆಯುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಮನವಿ ಮಾಡಿದರು.

ಇಸ್ರೋ ಅಧ್ಯಕ್ಷರು, ಚಂದ್ರಯಾನ-3 ಮಿಷನ್ ತಂಡವನ್ನು ಸನ್ಮಾನಿಸಿದ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್
ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರು ಶುಕ್ರವಾರ ಚಂದ್ರಯಾನ-3 ಮಿಷನ್ ಯಶಸ್ಸು ಕಂಡಿದ್ದಕ್ಕೆ ಇಸ್ರೋ ಅಧ್ಯಕ್ಷ ಎಸ್ ಸೋಮನಾಥ್ ಮತ್ತು ಅವರ ತಂಡವನ್ನು ಅಭಿನಂದಿಸಿದರು. ಗೆಹ್ಲೋಟ್ ಅವರು ಇಸ್ರೋ ಕೇಂದ್ರ ಕಚೇರಿಗೆ ತೆರಳಿ ಭಾರತಕ್ಕೆ ಹೆಮ್ಮೆ ತಂದ ಚಂದ್ರಯಾನ-3 ತಂಡವನ್ನು ಅಭಿನಂದಿಸಿದರು.

