ಇಲ್ಲಿ ನಡೆಯುತ್ತಿರುವ ದಕ್ಷಿಣ ಏಷ್ಯನ್ ಕ್ರೀಡಾಕೂಟದ ಟೇಬಲ್ ಟೆನಿಸ್ ವಿಭಾಗದ ಮೂರು ಡಬಲ್ಸ್ ಸ್ಪರ್ಧೆಯಲ್ಲಿ ಭಾರತ ಎರಡು ಚಿನ್ನ ಹಾಗೂ ಒಂದು ಬೆಳ್ಳಿ ಪದಕ ಮುಡಿಗೇರಿಸಿಕೊಂಡಿದೆ.