ರಾಜ್ಯಬೆಂಗಳೂರು: 3 ಕಳ್ಳತನ ಪ್ರಕರಣಗಳಲ್ಲಿ ನೇಪಾಳದ 17 ಮಂದಿಯ ಬಂಧನ
ಮೂರು ಮನೆಗಳ್ಳತನಕ್ಕೆ ಸಂಬಂಧಿಸಿದಂತೆ ದಕ್ಷಿಣ ವಿಭಾಗದ ಪೊಲೀಸರು ನೇಪಾಳದ 17 ಜನರನ್ನು ಬಂಧಿಸಿದ್ದಾರೆ. ಸೆಕ್ಯುರಿಟಿ ಗಾರ್ಡ್ ಮತ್ತು ಮನೆಕೆಲಸದವರಾಗಿ ಕೆಲಸ ಮಾಡುತ್ತಿದ್ದ ಮಹಿಳೆಯರು ಸೇರಿದಂತೆ ಆರೋಪಿಗಳು ಇಬ್ಬರು ಉದ್ಯಮಿಗಳು ಮತ್ತು ನಿವೃತ್ತ ಅರಣ್ಯ ಅಧಿಕಾರಿಯೊಬ್ಬರ ಮನೆಗಳಲ್ಲಿ ಬೆಲೆಬಾಳುವ ವಸ್ತುಗಳನ್ನು ಕಳವು ಮಾಡಿದ್ದರು.