ದೇಶಪಿಐಬಿ ಪ್ರಧಾನ ನಿರ್ದೇಶಕರಿಗೂ ಕೊರೋನಾ ಸೋಂಕು: ಏಮ್ಸ್ ಗೆ ದಾಖಲು
ಪ್ರೆಸ್ ಇನ್ಫರ್ಮೇಷನ್ ಬ್ಯುರೊ (ಪಿಐಬಿ) ಪ್ರಧಾನ ನಿರ್ದೇಶಕ ಕೆ.ಎಸ್.ಧತವಾಲಿಯಾ ಅವರಿಗೆ ಕೋವಿಡ್-19 ದೃಢಪಟ್ಟಿದೆ. ಅವರು ಚಿಕಿತ್ಸೆಗಾಗಿ ಏಮ್ಸ್ ಗೆ ದಾಖಲಾಗಿದ್ದಾರೆ. ಅವರ ಆರೋಗ್ಯ ಸ್ಥಿತಿಗತಿಗಳ ಬಗ್ಗೆ ಇದುವರೆಗೂ ಯಾವುದೇ ಅಧಿಕೃತ ಮಾಹಿತಿಗಳು ಹೊರಬಿದ್ದಿಲ್ಲ.