ದೇಶಛತ್ತೀಸಗಢ: ಕಾರ್ಮಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ ಅಪಘಾತ; 15 ಮಂದಿ ಸಾವು, ಹಲವರಿಗೆ ಗಾಯ
ಛತ್ತೀಸ್ಗಢದ ದುರ್ಗ್ ಜಿಲ್ಲೆಯಲ್ಲಿ ಮಂಗಳವಾರ ರಾತ್ರಿ ಬಸ್ಸೊಂದು 'ಮುರುಮ್' ಮಣ್ಣಿನ ಗಣಿಗಾರಿಕೆ ಗುಂಡಿಗೆ ಬಿದ್ದಿದ್ದರಿಂದ ಕನಿಷ್ಠ 15 ಜನರು ಸಾವಿಗೀಡಾಗಿದ್ದು, 12ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಇವರೆಲ್ಲರೂ ಖಾಸಗಿ ಸಂಸ್ಥೆಯ ಉದ್ಯೋಗಿಗಳು ಎಂದು ಅಧಿಕಾರಿಗಳು ತಿಳಿಸಿದ್ದಾರೆ.