ದೇಶಬೆಳಗಾವಿ ಮಹಿಳೆ ಬೆತ್ತಲೆ ಘಟನೆ 'ನಾಚಿಕೆಗೇಡು': ಜಿಪಿ ನಡ್ಡಾ ಖಂಡನೆ; ಸತ್ಯ ಶೋಧನಾ ಸಮಿತಿ ರಚನೆ
ಬೆಳಗಾವಿ ದಲಿತ ಮಹಿಳೆಯೊಬ್ಬರನ್ನು ಬೆತ್ತಲೆ ಮಾಡಿ ಥಳಿಸಿರುವ ಘಟನೆ ನಾಚಿಕೆಗೇಡಿನ ಸಂಗತಿ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಶುಕ್ರವಾರ ಖಂಡಿಸಿದ್ದು, ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಮಹಿಳೆಯರ ವಿರುದ್ಧ ಇಂತಹ ಘೋರ ಅಪರಾಧಗಳು ನಿಯಮಿತವಾಗಿ ನಡೆಯುತ್ತಿವೆ ಎಂದು ಆರೋಪಿಸಿದ್ದಾರೆ.