ರಾಜ್ಯಕೆಐಎಡಿಬಿ ಕಚೇರಿಗಳಲ್ಲಿ ದಲ್ಲಾಳಿಗಳಿಗೆ ಲಗಾಮು: ಸರ್ಕಾರದಿಂದ ಸುತ್ತೋಲೆ ಪ್ರಕಟ
ಕೈಗಾರಿಕಾ ಪ್ರದೇಶಗಳ ಅಭಿವೃದ್ಧಿಗಾಗಿ ಭೂಮಿ ಕಳೆದುಕೊಂಡ ರೈತರ ಪರವಾಗಿ ಕೆಐಎಡಿಬಿ ಕೇಂದ್ರ ಕಚೇರಿ ಮತ್ತು ವಲಯ ಕಚೇರಿಗಳಲ್ಲಿ ಕಾಣಿಸಿಕೊಳ್ಳುವ ದಲ್ಲಾಳಿಗಳು ಹಾಗೂ ಅವರ ಜೊತೆ ಕೈಜೋಡಿಸುವ ಅಧಿಕಾರಿ, ಸಿಬ್ಬಂದಿಗಳ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಭಾರೀ ಮತ್ತು ಮಧ್ಯಮ ಕೈಗಾರಿಕೆಗಳ ಸಚಿವ ಎಂ ಬಿ ಪಾಟೀಲ ಎಚ್ಚರಿಸಿದ್ದು, ಈ ಸಂಬಂಧ ಸುತ್ತೋಲೆ ಹೊರಡಿಸಲಾಗಿದೆ.