ದಾಂಧಲೆ

Lionel Messi: ಮೆಸ್ಸಿ ನೋಡಲು ಸಾಧ್ಯವಾಗದೆ ರೊಚ್ಚಿಗೆದ್ದ ಫ್ಯಾನ್ಸ್; ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ದಾಂಧಲೆ; Video
ಲಿಯೋನೆಲ್ ಮೆಸ್ಸಿ ಇಂದು ಬೆಳಗ್ಗೆ 11.30 ರ ಸುಮಾರಿಗೆ ವಿವೇಕಾನಂದ ಯುವ ಭಾರತಿ ಕ್ರೀಡಾಂಗಣಕ್ಕೆ ಸ್ಟ್ರೈಕರ್ ಲೂಯಿಸ್ ಸುವಾರೆಜ್ ಮತ್ತು ಅರ್ಜೆಂಟೀನಾ ತಂಡದ ಸಹ ಆಟಗಾರ ರೊಡ್ರಿಗೋ ಡಿ ಪಾಲ್ ಅವರೊಂದಿಗೆ ಆಗಮಿಸಿದರು, ಮೊದಲು ಮೈದಾನಕ್ಕೆ ಇಳಿದರು.

ಮಹಾರಾಷ್ಟ್ರ DCM ಏಕನಾಥ್ ಶಿಂಧೆ ಕುರಿತು ಹಾಸ್ಯದ ಮೂಲಕ ಟೀಕೆ; ಕಾಮಿಡಿಯನ್ ಕುನಾಲ್ ಕಾಮ್ರಾ ವಿರುದ್ಧ ಶಿವಸೇನೆ ಕಿಡಿ, ಸ್ಟುಡಿಯೋ ಧ್ವಂಸ
ಕುನಾಲ್ ಕಾಮ್ರಾ ಅವರು ಮುಂಬೈನ ಹ್ಯಾಬಿಟಾಟ್ ಕಾಮಿಡಿ ಕ್ಲಬ್‌ನಲ್ಲಿ ಕಾರ್ಯಕ್ರಮ ನೀಡುವಾಗ ಮಹಾರಾಷ್ಟ್ರದ ರಾಜಕೀಯ ವಿಭಜನೆಯ ಬಗ್ಗೆ ಮಾತನಾಡಿದ್ದರು.

ಬೆಂಗಳೂರಿನಲ್ಲಿ ನಿಲ್ಲದ ರೋಡ್ ರೇಜ್: ಶಾಲಾ ವಾಹನ ಅಡ್ಡಗಟ್ಟಿ ಪುಂಡರಿಂದ ದಾಂಧಲೆ
KA 01 MB 5796 ವಾಹನ ನೋಂದಣಿ ಸಂಖ್ಯೆಯ ಸ್ಕಾರ್ಪಿಯೋದಲ್ಲಿದ್ದ 6-8 ಕ್ಕೂ ಹೆಚ್ಚು ದುಷ್ಕರ್ಮಿಗಳು ಶಾಲಾ ಬಸ್ ಮೇಲೆ ದಾಳಿ ಮಾಡಿದ್ದಾರೆ.

ಹೊಸಕೋಟೆ: ಕೊಲೆ ಆರೋಪಿ ಮನೆ ಮೇಲೆ ಕುಟುಂಬಸ್ಥರ ದಾಳಿ, ಕೆಲಕಾಲ ಬಿಗುವಿನ ವಾತಾವರಣ ಸೃಷ್ಟಿ
ಜೂನ್ 16ರಂದು ಬೆಳಗ್ಗೆ ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಗಂಗಾಪುರ ಗ್ರಾಮದ ನವೀನ್ ನಾಯಕ್ ಎಂಬಾತನನ್ನು ದುಷ್ಕರ್ಮಿಗಳು ಕಾರಿನಲ್ಲಿ ಬಂದು ಬರ್ಬರವಾಗಿ ಕೊಲೆಗೈದಿದ್ದರು. ತರಕಾರಿ ತರುತ್ತಿದ್ದ ನವೀನ್ ಕಾರು ಅಡ್ಡಗಟ್ಟಿ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದರು.

ಬೇಕರಿಗೆ ನುಗ್ಗಿ ದುಷ್ಕರ್ಮಿಗಳ ದಾಂಧಲೆ: ತಂಡ ರಚಿಸಿ ಪುಂಡರ ಪತ್ತೆಗಿಳಿದ ಪೊಲೀಸರು!
ಬೇಕರಿಯೊಂದಕ್ಕೆ ನುಗ್ಗಿದ ಮುಸುಕುಧಾರಿ ದುಷ್ಕರ್ಮಿಗಳ ತಂಡವೊಂದು, ದಾಂಧಲೆ ನಡೆಸಿರುವ ಘಟನೆಯೊಂದು ಬ್ಯಾಡರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ತುಂಗಾನಗರದಲ್ಲಿ ನಡೆದಿದೆ.

ತಾಂತ್ರಿಕ ದೋಷದಿಂದ 'ವಕೀಲ್ ಸಾಬ್' ಪ್ರದರ್ಶನ ಸ್ಥಗಿತ'; ವೀಕ್ಷಕರಿಂದ ಚಿತ್ರಮಂದಿರದಲ್ಲಿ ದಾಂಧಲೆ: ವಿಡಿಯೋ
ಕೊರೋನಾ ವೈರಸ್ ಭೀತಿಯ ನಡುವೆಯೂ ಪವನ್ ಕಲ್ಯಾಣ್ ಅಭಿನಯದ ಬಹುನಿರೀಕ್ಷಿತ 'ವಕೀಲ್ ಸಾಬ್' ಇಂದು ವಿಶ್ವದಾದ್ಯಂತ ಬಿಡುಗಡೆಯಾಗಿದ್ದು, ಭರ್ಜರಿ ಪ್ರದರ್ಶನ ಕಾಣುತ್ತಿದೆ.

ಮೇಲ್ಮನೆ ಗದ್ದಲ: ಪರಿಷತ್ ಕಾರ್ಯದರ್ಶಿಗೆ ಶೋಕಾಸ್ ನೋಟೀಸ್; ಸಮಗ್ರ ವರದಿ ಸಲ್ಲಿಸುವಂತೆ ಸಭಾಪತಿ ಸೂಚನೆ
ಸದನ ಕಾರ್ಯಕಲಾಪ ದಾರಿ ತಪ್ಪಲು ಮತ್ತು ಕರ್ತವ್ಯ ನಿರ್ವಹಣೆಯಲ್ಲಿ ಅತೀವ ನಿರ್ಲಕ್ಷ್ಯ ತೋರಿರುವ ವಿಧಾನಪರಿಷತ್ ಕಾರ್ಯದರ್ಶಿಯವರಿಗೆ ಸಭಾಪತಿ ಪ್ರತಾಪ್ ಚಂದ್ರ ಶೆಟ್ಟಿ ಶೋಕಾಸ್ ನೋಟಿಸ್ ಜಾರಿ ಮಾಡಿದ್ದಾರೆ.

ಎದೆನೋವಿನಿಂದ ರೋಗಿ ಸಾವು: ಜಯದೇವ ಆಸ್ಪತ್ರೆಯಲ್ಲಿ ಮೃತನ ಸಂಬಂಧಿಕರಿಂದ ದಾಂಧಲೆ
ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ಸಂಬಂಧಿಕರು ಜಯದೇವ ಆಸ್ಪತ್ರೆಯ ಗಾಜು ಒಡೆದು ದಾಂಧಲೆ ನಡೆಸಿದ ಘಟನೆ ಭಾನುವಾರ ರಾತ್ರಿ ನಡೆದಿದೆ.

ಮಂಗಳೂರಿನಲ್ಲಿ ಪೌರತ್ವ ಕಿಚ್ಚು: ಆಸ್ಪತ್ರೆಯಲ್ಲಿ ಪೊಲೀಸರ ದಾಂಧಲೆ ವಿಡಿಯೋ ವೈರಲ್
ಪೌರತ್ವ ಕಾಯ್ದೆ ವಿರುದ್ಧ ಮಂಗಳೂರಿನಲ್ಲಿ ನಡೆದ ಹಿಂಸಾಚಾರದ ವೇಳೆ ಪೊಲೀಸರು ಆಸ್ಪತ್ರೆಯೊಂದರಲ್ಲಿ ಪ್ರತಿಭಟನಾಕಾರರ ಮೇಲೆ ನಡೆಸಿರುವ ದಾಂಧಲೆಯ ವಿಡಿಯೋವೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

