ದೇಶಪ್ರಧಾನಿ ಮೋದಿ ಹುಟ್ಟುಹಬ್ಬದಂದು ಸಾರ್ವಕಾಲಿಕ ದಾಖಲೆ: ಒಂದೇ ದಿನ 2.50 ಕೋಟಿ ಮಂದಿಗೆ ಕೋವಿಡ್ ಲಸಿಕೆ!
ಕೋವಿಡ್ ಲಸಿಕೆ ಅಭಿಯಾನದಲ್ಲಿ ಭಾರತ ಶುಕ್ರವಾರ ಹೊಸ ಮೈಲುಗಲ್ಲು ಸಾಧಿಸಿದ್ದು, ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನವಾದ ಇಂದು ದೇಶಾದ್ಯಂತ ದಾಖಲೆಯ ಎರಡೂವರೆ ಕೋಟಿಗೂ ಹೆಚ್ಚು ಮಂದಿಗೆ ಕೋವಿಡ್ ಲಸಿಕೆ ನೀಡಲಾಗಿದೆ.