ಕ್ರಿಕೆಟ್ಮೂರನೇ ಏಕದಿನ ಪಂದ್ಯದಿಂದ ಹೊರಬಿದ್ದ ದೀಪಕ್ ಚಾಹರ್, ನವದೀಪ್ ಸೈನಿಗೆ ಅವಕಾಶ
ವೆಸ್ಟ್ ಇಂಡೀಸ್ ವಿರುದ್ಧ ಎರಡನೇ ಏಕದಿನ ಪಂದ್ಯದಲ್ಲಿ ಭರ್ಜರಿ ಜಯ ಸಾಧಿಸಿ ಖುಷಿಯಲ್ಲಿರುವ ಟೀಮ್ ಇಂಡಿಯಾಗಿ ಆಘಾತ ಉಂಟಾಗಿದೆ. ಕಳೆದ ಎರಡೂ ಪಂದ್ಯಗಳಲ್ಲಿ ಸಮಯೋಜಿತವಾಗಿ ಬೌಲಿಂಗ್ ನಿರ್ವಹಿಸಿದ್ದ ದೀಪಕ್ ಚಾಹರ್ ಗಾಯದಿಂದಾಗಿ ಮೂರನೇ ಏಕದಿನ ಪಂದ್ಯದಿಂದ ಹೊರ ನಡೆದಿದ್ದಾರೆ. ಅವರ ಸ್ಥಾನಕ್ಕೆ ನವದೀಪ್ ಸೈನಿಗೆ ಅವಕಾಶ ಕಲ್ಪಿಸಲಾಗಿದೆ.