ದೇಶದೆಹಲಿ ಅಬಕಾರಿ ನೀತಿ 'ಹಗರಣ': ಪಿಎಂಎಲ್ಎ ಅಡಿಯಲ್ಲಿ 76.54 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಜಪ್ತಿ ಮಾಡಿದ ಇ.ಡಿ
ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ ಪ್ರಕರಣದ ತನಿಖೆಯಲ್ಲಿ ದೆಹಲಿ ಮತ್ತು ಮುಂಬೈನ ದುಬಾರಿ ಪ್ರದೇಶಗಳಲ್ಲಿ ನೆಲೆಗೊಂಡಿರುವ ಮನೆಗಳು, ರೆಸ್ಟೋರೆಂಟ್ಗಳು, 50 ವಾಹನಗಳು ಮತ್ತು ₹ 76.54 ಕೋಟಿ ಮೌಲ್ಯದ ಬ್ಯಾಂಕ್ ಠೇವಣಿಗಳನ್ನು ಜಪ್ತಿ ಮಾಡಲಾಗಿದೆ ಎಂದು ಜಾರಿ ನಿರ್ದೇಶನಾಲಯ (ಇಡಿ) ಬುಧವಾರ ತಿಳಿಸಿದೆ.