ದೇಶದೆಹಲಿ ಹಿಂಸಾಚಾರ: ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ ಅಜಿತ್ ದೋವಲ್, ಭದ್ರತೆ ಪರಿಶೀಲನೆ
ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧದ ಪ್ರತಿಭಟನೆಗೆ ರಾಷ್ಟ್ರ ರಾಜಧಾನಿ ಹೊತ್ತಿ ಉರಿಯುತ್ತಿದ್ದು, ಪ್ರತಿಭಟನೆ ಈ ವರೆಗೂ 13 ಮಂದಿಯನ್ನು ಬಲಿಪಡೆದುಕೊಂಡಿದೆ. ಈನಡುವಲ್ಲೇ ಪ್ರತಿಭಟನಾ ಸ್ಥಳಕ್ಕೆ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅವರು ಭೇಟಿ ನೀಡಿದ್ದು, ಭದ್ರತೆಯನ್ನು ಪರಿಶೀಲನೆ ನಡೆಸುತ್ತಿದ್ದಾರೆಂದು ವರದಿಗಳು ತಿಳಿಸಿವೆ.