ರಾಜ್ಯದೌರ್ಜನ್ಯ ಪ್ರತಿಬಂಧಕ ಅಧಿನಿಯಮದಡಿ ಶಿಕ್ಷೆಯ ಪ್ರಮಾಣ ಹೆಚ್ಚಿಸಲು ಕ್ರಮ: ಮುಖ್ಯಮಂತ್ರಿ ಸೂಚನೆ
ರಾಜ್ಯದಲ್ಲಿ ದೌರ್ಜನ್ಯ ಪ್ರತಿಬಂಧ ಅಧಿನಿಯಮದಡಿಯ ಪ್ರಕರಣಗಳಲ್ಲಿ ಶಿಕ್ಷೆ ಯ ಪ್ರಮಾಣ ಕೇವಲ ಶೇ.5 ರಿಂದ 6 ರಷ್ಟಿವೆ.ಶಿಕ್ಷೆಯ ಪ್ರಮಾಣ ಹೆಚ್ಚಿಸಲು ವ್ಯಾಜ್ಯ ಮತ್ತು ಅಭಿಯೋಗ ಇಲಾಖೆ ಹಾಗೂ ಪೊಲೀಸ್ ಇಲಾಖೆಯ ಅಧಿಕಾರಿಗಳು ಮುತುವರ್ಜಿ ವಹಿಸಿ ಕಾರ್ಯನಿರ್ವಹಿಸಬೇಕು ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.