ದೇಶಧನಬಾದ್ ಹಿಟ್ ಅಂಡ್ ರನ್, ನ್ಯಾಯಾಧೀಶರ ಹತ್ಯೆ ಪ್ರಕರಣ: ಇಬ್ಬರು ದೋಷಿ, ಆ.6ರಂದು ಶಿಕ್ಷೆ ಪ್ರಮಾಣ ಘೋಷಣೆ
ಕಳೆದ ವರ್ಷ ಜಾರ್ಖಂಡ್ನ ಧನಬಾದ್ನಲ್ಲಿ ನಡೆದಿದ್ದ ನ್ಯಾಯಾಧೀಶ ಉತ್ತಮ್ ಆನಂದ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರ್ಖಂಡ್ನ ವಿಶೇಷ ಸಿಬಿಐ ನ್ಯಾಯಾಲಯ ಗುರುವಾರ ತೀರ್ಪು ನೀಡಿದ್ದು, ಪ್ರಕರಣದ ಆರೋಪಿಗಳಾಗಿದ್ದ ಆಟೋರಿಕ್ಷಾ ಚಾಲಕ ಮತ್ತು ಇನ್ನೊಬ್ಬನನ್ನು ದೋಷಿ ಎಂದು ಮಹತ್ವದ ತೀರ್ಪು ನೀಡಿದೆ.