ಧರ್ಮಸ್ಥಳ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಮರ್ದಾಳ ಬಳಿ ಶನಿವಾರ ಸಂಜೆ ಓಮ್ನಿ ವ್ಯಾನ್ ಕಾರೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಮೃತಪಟ್ಟಿದ್ದು, ಎಂಟು ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.