ರಾಜ್ಯತಿರುಪತಿಗೆ ನಂದಿನಿ ತುಪ್ಪ ಸ್ಥಗಿತ: ಕೆಎಂಎಫ್ ಆರೋಪ ತಿರಸ್ಕರಿಸಿದ ಟಿಟಿಡಿ; 'ವರ್ಷದ ಹಿಂದಿನ ವಿಚಾರ' ಎಂದ ಸಿಎಂ ಸಿದ್ದರಾಮಯ್ಯ
ತಿರುಪತಿ ತಿರುಮಲ ದೇವಸ್ಥಾನ ಟ್ರಸ್ಟ್ (ಟಿಟಿಡಿ) ಲಡ್ಡು ತಯಾರಿಕೆಗೆ ತುಪ್ಪ ಪೂರೈಕೆ ಮಾಡಲು ಅನುಮತಿ ನೀಡಿಲ್ಲ ಎಂಬ ಕರ್ನಾಟಕ ರಾಜ್ಯ ಹಾಲು ಉತ್ಪಾದಕರ ಮಹಾಮಂಡಳ (ಕೆಎಂಎಫ್) ಅಧ್ಯಕ್ಷ ಹೇಳಿರುವ ಮಾತು ಸತ್ಯಕ್ಕೆ ದೂರವಾದದ್ದು ಎಂದು ಟಿಟಿಡಿ ಮಂಗಳವಾರ ಸ್ಪಷ್ಟಪಡಿಸಿದೆ.