ಧಾರಾಕಾರ ಮಳೆ

ದಿತ್ವಾ ಚಂಡಮಾರುತ: ಲಂಕಾದಲ್ಲಿ ಧಾರಾಕಾರ ಮಳೆ; ಪ್ರವಾಹಕ್ಕೆ 123 ಮಂದಿ ಸಾವು, 130 ಜನ ನಾಪತ್ತೆ!
ಚಂಡಮಾರುತ ಬುಧವಾರ ಭೂಕುಸಿತವನ್ನು ಉಂಟುಮಾಡಿದರೂ, ದ್ವೀಪದಾದ್ಯಂತ ದಾಖಲೆಯ ಮಳೆಯನ್ನು ಉಂಟುಮಾಡಿದರೂ, ಸೋಮವಾರದಿಂದಲೇ ಹವಾಮಾನ ವ್ಯತ್ಯಾಸದ ಪರಿಣಾಮಗಳು ಕಂಡುಬರುತ್ತಿವೆ.

ಕಥುವಾದಲ್ಲಿ ಧಾರಾಕಾರ ಮಳೆಯ ಪರಿಣಾಮ ಭೂ ಕುಸಿತ, 8 ಮಂದಿ ಸಾವು!
ಜಮ್ಮು-ಕಾಶ್ಮೀರದ ಕಥುವಾದಲ್ಲಿ ಧಾರಾಕಾರ ಮಳೆಯ ಪರಿಣಾಮ ಭೂಕುಸಿತ ಉಂಟಾಗಿ ಹಲವು ಮನೆಗಳು ಹಾನಿಗೊಳಗಾಗಿ 8 ಮಂದಿ ಸಾವನ್ನಪ್ಪಿದ್ದಾರೆ.

ಕೊಪ್ಪಳ: ಸತತ ಮಳೆಗೆ ಮನೆ ಕುಸಿದು ವೃದ್ಧೆ, ನವಜಾತ ಶಿಶು ಸಾವು
ಜಿಲ್ಲೆಯ ಕನಕಗಿರಿಯ ಜೀರಾಳ ಎಂಬ ಗ್ರಾಮದಲ್ಲಿ ಕಳೆದ ರಾತ್ರಿಯಿಂದ ಎಡೆಬಿಡದೆ ಸುರಿಯುತ್ತಿರುವ ಮಳೆಗೆ ಮನೆ ಕುಸಿದು ಬಿದ್ದ ಪರಿಣಾಮ ವೃದ್ಧೆ ಹಾಗೂ 20 ದಿನದ ನವಜಾತ ಶಿಶು ಮೃತಪಟ್ಟಿದೆ.

ಬೆಂಗಳೂರಿನಲ್ಲಿ ಮುಂದುವರೆದ ಧಾರಾಕಾರ ಮಳೆ, ಜನಜೀವನ ಸಂಪೂರ್ಣ ಅಸ್ತವ್ಯಸ್ಥ
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆ ಸೋಮವಾರ ರಾತ್ರಿಯೂ ಮುಂದುವರೆದಿದ್ದು, ಉದ್ಯಾನನಗರಿ ಅಕ್ಷರಶಃ ನಲುಗಿ ಹೋಗಿದ್ದು, ಬಹುತೇಕ ಪ್ರದೇಶಗಳು ಜಲಾವೃತವಾಗಿವೆ.

ರಾಮನಗರ, ಕೊಡಗು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ, ಶಾಲೆಗಳಿಗೆ ರಜೆ
ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಸೋಮವಾರ ವ್ಯಾಪಾಕ ಮಳೆ ಮುಂದುವರಿದಿದ್ದು, ಆಯಾ ಜಿಲ್ಲೆಗಳ ಪರಿಸ್ಥಿತಿ ನೋಡಿಕೊಂಡು ಜಿಲ್ಲಾಡಳಿತ ಮುಂಜಾಗ್ರತಾ ಕ್ರಮವಾಗಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿವೆ.

ಕರಾವಳಿ ಭಾಗದಲ್ಲಿ ಮುಂದುವರಿದ ಮಳೆ: ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಶಾಲೆ-ಕಾಲೇಜುಗಳಿಗೆ ರಜೆ ಮುಂದುವರಿಕೆ
ಕರಾವಳಿ ಭಾಗದಲ್ಲಿ ಶುಕ್ರವಾರ ಕೂಡ ಮಳೆ ಮುಂದುವರಿದಿದ್ದು, ದಕ್ಷಿಣ ಕನ್ನಡ-ಉಡುಪಿ ಜಿಲ್ಲೆಗಳಲ್ಲಿ ಇಂದು ಸಹ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಮಂಗಳೂರು ಸೇರಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಳೆ; ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ, ಉಡುಪಿಯಲ್ಲೂ ಧಾರಾಕಾರ ವರ್ಷಧಾರೆ
ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಇಂದು ಗುರುವಾರ ಧಾರಾಕಾರ ಮಳೆಯಾಗುತ್ತಿದ್ದು, ತಗ್ಗು ಪ್ರದೇಶಗಳು ಜಲಾವೃತವಾಗಿವೆ. ಮಂಗಳೂರು ನಗರದಲ್ಲಿ ಬಹುತೇಕ ಕಡೆ ರಸ್ತೆಗಳಲ್ಲೆಲ್ಲಾ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು ನಗರದಾದ್ಯಂತ ಸಂಚಾರ ದಟ್ಟಣೆ ಉಂಟಾಗಿದೆ.

ಬೆಂಗಳೂರು ಸೇರಿದಂತೆ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ನಿರಂತರ ಮಳೆ
ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಕಳೆದ ಕೆಲವು ದಿನಗಳಿಂದ ನಿರಂತರ ಮಳೆಯಾಗುತ್ತಿದೆ. ಇದು ಇನ್ನೂ ಎರಡರಿಂದ ಮೂರು ದಿನ ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ತಜ್ಞರು ಗುರುವಾರ ಹೇಳಿದ್ದಾರೆ.

ರಾಜ್ಯದಲ್ಲಿ ಮುಂಗಾರು ಚುರುಕು: ಕರಾವಳಿ ಜಿಲ್ಲೆಗಳಲ್ಲಿ ಯೆಲ್ಲೊ ಅಲರ್ಟ್ ಘೋಷಣೆ
ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದು, ಕರಾವಳಿ ಜಿಲ್ಲೆಗಳಲ್ಲಿ ಜೂನ್ 28ರಿಂದ ಜುಲೈ 1ರವರೆಗೆ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

