ರಾಜ್ಯಪೊಲೀಸ್ ನೇಮಕಾತಿ ಪರೀಕ್ಷೆ: ಧಾರ್ಮಿಕ ಉಡುಪಿಗೆ ಯಾವುದೇ ನಿರ್ಬಂಧವಿಲ್ಲ; ಸಚಿವ ಪ್ರಿಯಾಂಕ್ ಖರ್ಗೆ ಸ್ಪಷ್ಟನೆ
ಪರೀಕ್ಷೆಯನ್ನು ಪಾರದರ್ಶಕ, ನ್ಯಾಯಸಮ್ಮತ ಹಾಗೂ ಸುಗಮವಾಗಿ ನಡೆಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಪರೀಕ್ಷಾ ಕೇಂದ್ರಗಳಲ್ಲಿ ಪಾಲಿಸಬೇಕಾದ ಉಡುಪು ನಿಯಮ, ತರಬಹುದಾದ ಹಾಗೂ ನಿಷೇಧಿತ ವಸ್ತುಗಳ ಕುರಿತು ಅಭ್ಯರ್ಥಿಗಳ ಪ್ರವೇಶ ಪತ್ರದಲ್ಲೇ ಸ್ಪಷ್ಟ ಮಾಹಿತಿ ನೀಡಲಾಗಿದೆ.