ದೇಶಯೂಟ್ಯೂಬರ್ ಧ್ರುವ್ ರಾಠೆ ವಿಡಿಯೋ ಬಳಿಕ ಅತ್ಯಾಚಾರ, ಜೀವ ಬೆದರಿಕೆಗಳು ಬರುತ್ತಿವೆ: ಸ್ವಾತಿ ಮಲಿವಾಲ್
ಪಕ್ಷದ ನಾಯಕರು ಮತ್ತು ಕಾರ್ಯಕರ್ತರಿಂದ ಚಾರಿತ್ರ್ಯ ವಧೆ ಅಭಿಯಾನದ ನಂತರ ತನಗೆ ಅತ್ಯಾಚಾರ ಮತ್ತು ಕೊಲೆ ಬೆದರಿಕೆಗಳು ಬರುತ್ತಿವೆ. ಯೂಟ್ಯೂಬರ್ ಧ್ರುವ್ ರಾಠೆ ಅವರು ತಮ್ಮ ವಿರುದ್ಧ ಏಕಪಕ್ಷೀಯವಾದ ವಿಡಿಯೋವನ್ನು ಪೋಸ್ಟ್ ಮಾಡಿದ ನಂತರ ಪರಿಸ್ಥಿತಿ ಉಲ್ಬಣಗೊಂಡಿದೆ ಎಂದು ಎಎಪಿ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಭಾನುವಾರ ಹೇಳಿದ್ದಾರೆ.