ಕ್ರಿಕೆಟ್ಐಸಿಸಿ ಟೆಸ್ಟ್ ರ್ಯಾಂಕಿಂಗ್: ಸ್ಟೀವ್ ಸ್ಮಿತ್ ಹಿಂದಿಕ್ಕಿ ಮತ್ತೆ ನಂ.1 ಸ್ಥಾನಕ್ಕೇರಿದ ವಿರಾಟ್ ಕೊಹ್ಲಿ
ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ(ಐಸಿಸಿ) ಬುಧವಾರ ನೂತನ ಟೆಸ್ಟ್ ರ್ಯಾಂಕಿಂಗ್ ಪಟ್ಟಿ ಪ್ರಕಟಿಸಿದ್ದು, ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಅವರು ಅಗ್ರಸ್ಥಾನದಲ್ಲಿದ್ದ ಆಸ್ಟ್ರೇಲಿಯಾ ತಂಡದ ಮಾಜಿ ನಾಯಕ ಸ್ಟೀವ್ ಸ್ಮಿತ್ ಅವರನ್ನು ಹಿಂದಿಕ್ಕಿ ಮತ್ತೆ ನಂ.1 ಸ್ಥಾನಕ್ಕೇರಿದ್ದಾರೆ.