ನಂದಿಗ್ರಾಮ

ಪಶ್ಚಿಮ ಬಂಗಾಳ ಉಪಚುನಾವಣೆ: ನಂದಿಗ್ರಾಮದಲ್ಲಿ ಹತ್ಯೆಗೀಡಾದ ಸಿಎಂ ಸುವೇಂದು ಆಪ್ತ ಸಹಾಯಕನ ತಾಯಿ ಕಣಕ್ಕೆ!
ರಾಥ್ ಅವರ ಆಯ್ಕೆ ಪಕ್ಷದ ನಂದಿಗ್ರಾಮ್ ಪ್ರಚಾರಕ್ಕೆ ಭಾವನಾತ್ಮಕ ಆಯಾಮವನ್ನು ನೀಡಿದೆ. ಏಕೆಂದರೆ, ಪಶ್ಚಿಮ ಬಂಗಾಳದಲ್ಲಿ ಟಿಎಂಸಿ (TMC)ಯನ್ನು ಸೋಲಿಸಿ ಬಿಜೆಪಿ ಅಧಿಕಾರಕ್ಕೆ ಬಂದ ಕೆಲವೇ ದಿನಗಳಲ್ಲಿ ಅವರ ಮಗ ಚಂದ್ರನಾಥ್ ರಾಥ್ ಅವರನ್ನು ಉತ್ತರ 24 ಪರಗಣ ಜಿಲ್ಲೆಯಲ್ಲಿ ಗುಂಡಿಕ್ಕಿ ಕೊಲ್ಲಲಾಗಿತ್ತು.

'ಮಮತಾ ಬ್ಯಾನರ್ಜಿ ಸ್ಪರ್ಧಿಸಿದರೆ, ನಾವು ಅಭ್ಯರ್ಥಿಯನ್ನು ಕಣಕ್ಕಿಳಿಸುವುದಿಲ್ಲ': ತೃಣಮೂಲ ಕಾಂಗ್ರೆಸ್ ಬಂಡಾಯ ಬಣ
ನಿಯಮದಂತೆ ಸುವೇಂದು ಅಧಿಕಾರಿ ಅವರು ನಂದಿಗ್ರಾಮ ಕ್ಷೇತ್ರವನ್ನು ತೆರವುಗೊಳಿಸಿರುವುದರಿಂದ ಅಕ್ಟೋಬರ್ 6 ರಂದು ಪಶ್ಚಿಮ ಬಂಗಾಳದ ನಂದಿಗ್ರಾಮದಲ್ಲಿ ಉಪಚುನಾವಣೆ ನಡೆಯಲಿದೆ.

West Bengal: ಭಬಾನಿಪುರ ಉಳಿಸಿಕೊಂಡು, ನಂದಿಗ್ರಾಮ ಸ್ಥಾನಕ್ಕೆ ಸುವೇಂದು ಅಧಿಕಾರಿ ರಾಜೀನಾಮೆ!
ನಂದಿಗ್ರಾಮದಲ್ಲಿ ತೃಣಮೂಲ ಕಾಂಗ್ರೆಸ್ ಅಭ್ಯರ್ಥಿ ಪಬಿತ್ರ ಕರ್ ಅವರನ್ನು 9,665 ಮತಗಳಿಂದ ಸೋಲಿಸಿದ್ದರು. ಭಬಾನಿಪುರದಲ್ಲಿ ಅವರು ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರನ್ನು 15,105 ಮತಗಳ ಅಂತರದಿಂದ ಸೋಲಿಸಿದ್ದರು.

ನಂದಿಗ್ರಾಮ ಕ್ಷೇತ್ರದಲ್ಲಿ ಸುವೇಂದು ಅಧಿಕಾರಿ ಗೆಲುವು ಪ್ರಶ್ನಿಸಿ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ
ನಂದಿಗ್ರಾಮ ವಿಧಾನಸಭೆಯಿಂದ ಸುವೇಂದು ಅಧಿಕಾರಿ ಶಾಸನಸಭೆಗೆ ಆಯ್ಕೆಯಾಗಿರುವುದನ್ನು ಪ್ರಶ್ನಿಸಿ ಮಮತಾ ಬ್ಯಾನರ್ಜಿ ಕೋರ್ಟ್ ಮೊರೆ ಹೋಗಿದ್ದಾರೆ.

ಟಿಎಂಸಿ ಶಾಸಕಾಂಗ ಪಕ್ಷದ ನಾಯಕಿಯಾಗಿ ಮಮತಾ ಅವಿರೋಧ ಆಯ್ಕೆ; ಮೇ 5ಕ್ಕೆ ಸಿಎಂ ಆಗಿ ಪ್ರಮಾಣವಚನ
ಪಶ್ಚಿಮ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ತೃಣಮೂಲ ಕಾಂಗ್ರೆಸ್ ಪಕ್ಷದ ಅಧಿನಾಯಕಿ ಮಮತಾ ಬ್ಯಾನರ್ಜಿ ಅವರು ಮೇ 5ರಂದು ಪ್ರಮಾಮ ವಚನ ಸ್ವೀಕರಿಸಲಿದ್ದಾರೆ ಎಂದು ತಿಳಿದುಬಂದಿದೆ.

ಜನರ ತೀರ್ಪಿಗೆ ತಲೆಬಾಗುತ್ತೇವೆ.. ಆದರೆ ಮರು ಮತಎಣಿಕೆ ಕುರಿತು ಕೋರ್ಟ್ ಗೆ ಅರ್ಜಿ: ಟಿಎಂಸಿ
ಚುನಾವಣೆಯಲ್ಲಿ ಜನರು ನೀಡಿರುವ ತೀರ್ಪನ್ನು ನಾವು ಗೌರವಿಸುತ್ತೇವೆ.. ಆದರೆ ನಂದಿಗ್ರಾಮ ಚುನಾವಣಾ ಫಲಿತಾಂಶದ ಕುರಿತು ಮರು ಮತಎಣಿಕೆಗೆ ಕೋರ್ಟ್ ಗೆ ಅರ್ಜಿ ಸಲ್ಲಿಸುತ್ತೇವೆ ಎಂದು ತೃಣಮೂಲ ಕಾಂಗ್ರೆಸ್ ಹೇಳಿದೆ.

ನಂದಿಗ್ರಾಮದಲ್ಲಿ ಸೋತು ಗೆದ್ದ ದೀದಿ ಶಿಷ್ಯ ಸುವೇಂದು ಅಧಿಕಾರಿ; ಸಿಎಂ ಮಮತಾಗೆ ತೀವ್ರ ಮುಖಭಂಗ
ನಂದಿಗ್ರಾಮ ಕ್ಷೇತ್ರದಲ್ಲಿ ದೊಡ್ಡ ಟ್ವಿಸ್ಟ್ ಎದುರಾಗಿದ್ದು ಸಿಎಂ ಮಮತಾ ಬ್ಯಾನರ್ಜಿ ಅವರು ಸುವೆಂದು ಅಧಿಕಾರಿ ವಿರುದ್ಧ ಸೋಲು ಕಂಡಿದ್ದಾರೆ.

ನಂದಿಗ್ರಾಮ ಕ್ಷೇತ್ರ: ಸತತ ಮುನ್ನಡೆ ಸಾಧಿಸಿದ್ದ ಮಮತಾ ಬ್ಯಾನರ್ಜಿಗೆ ಹಿನ್ನಡೆ!
ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಅದ್ಭುತ ಪ್ರದರ್ಶನ ನೀಡಿದ್ದು 210 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಆದರೆ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಾತ್ರ ನಂದಿಗ್ರಾಮದಲ್ಲಿ ಹಿನ್ನಡೆ ಅನುಭವಿಸುತ್ತಿದ್ದಾರೆ.

ಪಶ್ಚಿಮ ಬಂಗಾಳ ಚುನಾವಣೆ ಫಲಿತಾಂಶ-2021 ನಂದಿಗ್ರಾಮದಲ್ಲಿ ಸುವೇಂದು ಅಧಿಕಾರಿ ವಿರುದ್ಧ ಮಮತಾಗೆ ಮುನ್ನಡೆ
ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಹೈ ಪ್ರೊಫೈಲ್ ಅಖಾಡವಾಗಿರುವ ನಂದಿಗ್ರಾಮದಲ್ಲಿ ಸಿಎಂ ಮಮತಾ ಬ್ಯಾನರ್ಜಿ ತಮ್ಮ ಪ್ರತಿಸ್ಪರ್ಧಿ ಬಿಜೆಪಿಯ ಅಭ್ಯರ್ಥಿ ಸುವೇಂದು ಅಧಿಕಾರಿ ವಿರುದ್ಧ ಮುನ್ನಡೆ ಸಾಧಿಸಿದ್ದಾರೆ.

