ನಕಲಿ ಜಾತಿ ಪ್ರಮಾಣಪತ್ರ

'ಎಲ್ಲಾ ಆರೋಪಿಗಳನ್ನೂ ಕಟಕಟೆಯಲ್ಲಿ ನಿಲ್ಲುಸುತ್ತೇನೆ': "Kaise Haraya" ಕಾರ್ಪೋರೇಟರ್ ಸಹರ್ ಶೇಖ್ ಸವಾಲು; ಟ್ರೋಲರ್ಸ್ ವಿರುದ್ಧ ಕಾನೂನು ಕ್ರಮದ ಎಚ್ಚರಿಕೆ!
ನಕಲಿ ಜಾತಿ ಪ್ರಮಾಣಪತ್ರವನ್ನು ಬಳಸಿ ತನ್ನ ಮಗಳಿಗೆ ಒಬಿಸಿ ಪ್ರಮಾಣಪತ್ರವನ್ನು ಪಡೆದುಕೊಂಡ ಆರೋಪದ ಮೇಲೆ ಮುಂಬ್ರಾ ಕಾರ್ಪೊರೇಟರ್ ಸಹರ್ ಶೇಖ್ ಅವರ ತಂದೆ ಯೂನಸ್ ಶೇಖ್ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಲು ಥಾಣೆ ತಹಶೀಲ್ದಾರ್ ಕಚೇರಿ ಇತ್ತೀಚೆಗೆ ಶಿಫಾರಸು ಮಾಡಿತ್ತು.

ನಕಲಿ ಜಾತಿ ಪ್ರಮಾಣಪತ್ರ ಪ್ರಕರಣ: ಡಿಸಿವಿಸಿ ಶಿಫಾರಸ್ಸು ಮಾಡದೆ ನಾಗರಿಕ ಹಕ್ಕು ನಿರ್ದೇಶನಾಲಯ ಪ್ರಕರಣ ದಾಖಲಿಸಲಾಗದು- ಹೈಕೋರ್ಟ್
ನಕಲಿ ಜಾತಿ ಪ್ರಮಾಣ ಪತ್ರ ಪಡೆದ ಆರೋಪಿಗಳ ವಿರುದ್ಧ ಜಿಲ್ಲಾ ಜಾತಿ ಪರಿಶೀಲನಾ ಸಮಿತಿ (ಡಿಸಿವಿಸಿ) ಶಿಫಾರಸ್ಸು ಮಾಡದ ಹೊರತು ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯ ಪ್ರಕರಣ ದಾಖಲಿಸಲು ಆಗದು ಎಂದು ಹೈಕೋರ್ಟ್ ಈಚೆಗೆ ಸ್ಪಷ್ಟಪಡಿಸಿದೆ.

ರಾಯಚೂರು ಬಿಜೆಪಿ ಅಭ್ಯರ್ಥಿಗೆ ಸಂಕಷ್ಟ: ರಾಜಾ ಅಮರೇಶ್ವರ ನಾಯಕ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ವ್ಯಕ್ತಿ!
ರಾಯಚೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ಅವರು ಸುಳ್ಳು ದಾಖಲೆಗಳನ್ನು ನೀಡುವ ಮೂಲಕ ಎಸ್‌ಟಿ ಜಾತಿ ಪ್ರಮಾಣ ಪತ್ರ ಪಡೆದುಕೊಂಡಿದ್ದಾರೆ ಎಂದು ಆರೋಪಿಸಿ ವ್ಯಕ್ತಿಯೊಬ್ಬರು ಕರ್ನಾಟಕ ಹೈಕೋರ್ಟ್‌ನ ಕಲಬುರಗಿ ಪೀಠದ ಮೊರೆ ಹೋಗಿದ್ದಾರೆ.

ನಕಲಿ ಜಾತಿ ಪ್ರಮಾಣಪತ್ರದ ಪ್ರಯೋಜನ ಪ್ರಶ್ನಿಸಲು ಕಾಲಮಿತಿ ಅಡ್ಡಿ ಬರುವುದಿಲ್ಲ: ಹೈಕೋರ್ಟ್
ನಕಲಿ ಜಾತಿ ಪ್ರಮಾಣ ಪತ್ರದಿಂದ ಪಡೆದಿರುವ ಪ್ರಯೋಜನ ಪ್ರಶ್ನಿಸಲು ಕಾಲಮಿತಿಯ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೈಕೋರ್ಟ್‌ನ ಕಲಬುರಗಿ ಪೀಠ ಆದೇಶಿಸಿದೆ.

ನಕಲಿ ಜಾತಿ ಪ್ರಮಾಣ ಪತ್ರ ವಿರುದ್ಧ ಕ್ರಮ ಕೈಗೊಳ್ಳಿ: ಸರ್ಕಾರಕ್ಕೆ ಹೈಕೋರ್ಟ್ ಸೂಚನೆ
ಪರಿಶಿಷ್ಟ ವರ್ಗಕ್ಕೆ ಬರುವ ನಾಯಕ ಜನಾಂಗದ ಉಪಪಂಡಗಳಾದ ತಳವಾರ, ಪರಿವಾರದ ಹೆಸರಿನಲ್ಲಿ ಬೆಸ್ತರ ಉಪಜಾತಿಗಳಿಗೆ ನಕಲಿ ಪ್ರಮಾಣ ಪತ್ರ ನೀಡಲಾಗುತ್ತಿದೆ ಎಂದು ಆರೋಪಿಸಿರುವ ಅರ್ಜಿಗೆ ಸಂಬಂಧಿಸಿದಂತೆ ಕ್ರಮ ಕೈಗೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ ನೀಡಿದೆ.

ಹಾವೇರಿ: ನಕಲಿ ಜಾತಿ ಪ್ರಮಾಣಪತ್ರ ಸಲ್ಲಿಸಿದ್ದಕ್ಕಾಗಿ ಪೊಲೀಸ್ ಪೇದೆಗೆ 7 ವರ್ಷ ಜೈಲು ಶಿಕ್ಷೆ, 30 ಸಾವಿರ ರೂ. ದಂಡ
ನಕಲಿ ಜಾತಿ ಪ್ರಮಾಣ ಪತ್ರ ಸಲ್ಲಿಸಿದ್ದಕ್ಕಾಗಿ ಹಾವೇರಿ ಜಿಲ್ಲೆಯ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಪೊಲೀಸ್ ಪೇದೆ ಸೋಮಶೇಖರ ಭೀಮಪ್ಪ ಕುಂಕುಮಗಾರ ಅವರಿಗೆ ಏಳು ವರ್ಷ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.

