ನಕಲಿ ದಾಖಲೆಗಳು

ನಕಲಿ ದಾಖಲೆ ಬಳಸಿ ಪೊಲೀಸರಿಗೆ ಭೂಮಿ ಮಾರಾಟ ಮಾಡಿದ್ದಕ್ಕಾಗಿ ಬಿಜೆಪಿ ನಾಯಕನ ವಿರುದ್ಧ ಎಫ್‌ಐಆರ್!
ಪೊಲೀಸ್ ಲೈನ್ ನಿರ್ಮಾಣಕ್ಕೆ ನಕಲಿ ದಾಖಲೆ ನೀಡಿ ಜಮೀನನ್ನು 2 ಕೋಟಿ ರೂ.ಗೆ ಪೊಲೀಸರಿಗೆ ಮಾರಾಟ ಮಾಡಿದ ಆರೋಪದ ಮೇಲೆ ಸ್ಥಳೀಯ ಬಿಜೆಪಿ ಮುಖಂಡರೊಬ್ಬರ ವಿರುದ್ಧ ಪ್ರಕರಣ ದಾಖಲಾಗಿದ್ದು, ಅವರು ಅದೇ ಜಮೀನಿನ ಮೇಲೆ ಈಗಾಗಲೇ 78 ಲಕ್ಷ ರೂಪಾಯಿ ಸಾಲ ಪಡೆದಿದ್ದರು ಎನ್ನಲಾಗಿದೆ.

ಪೌರಕಾರ್ಮಿಕರಿಗೆ ನಕಲಿ ದಾಖಲೆಗಳನ್ನು ನೀಡಲಾಗಿದೆ, ನಾವು ಮುಷ್ಕರ ನಡೆಸುತ್ತೇವೆ: ಸಂಘ ಆರೋಪ
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ಹಲವು ವಾರ್ಡ್‌ಗಳಲ್ಲಿ ಒಂದೇ ಕುಟುಂಬದ ಒಬ್ಬರಿಗಿಂತ ಹೆಚ್ಚು ಸದಸ್ಯರನ್ನು ಪೌರಕಾರ್ಮಿಕರಾಗಿ ನೇಮಕ ಮಾಡಿರುವುದು ಕಾನೂನು ಉಲ್ಲಂಘನೆಯಾಗಿದೆ ಎಂದು ಪೌರಕಾರ್ಮಿಕರು ಆರೋಪಿಸಿದ್ದಾರೆ.

ಸಿಮ್ ಕಾರ್ಡ್, ಒಟಿಟಿ ಸೇವೆಗೆ ನಕಲಿ ದಾಖಲೆ: 50 ಸಾವಿರ ರೂ. ದಂಡ, 1 ವರ್ಷ ಜೈಲು
ಮಹತ್ವದ ಬೆಳವಣಿಗೆಯಲ್ಲಿ ಅಪರಾಧ ಪ್ರಕರಣಗಳಲ್ಲಿನ ಆರೋಪಿಗಳನ್ನು ಶೀಘ್ರ ಪತ್ತೆ ಮಾಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಹತ್ವದ ನಿರ್ಣಯ ಕೈಗೊಂಡಿದ್ದು, ಸಿಮ್ ಕಾರ್ಡ್, ಒಟಿಟಿ ಸೇವೆಗೆ ನಕಲಿ ದಾಖಲೆ ನೀಡುವವರಿಗೆ 50 ಸಾವಿರ ದಂಡ,1 ವರ್ಷ ಜೈಲು ಶಿಕ್ಷೆ ವಿಧಿಸಲು ಮುಂದಾಗಿದೆ.

ಜನತಾ ದರ್ಶನದಲ್ಲಿ ನಕಲಿ ದಾಖಲೆ ಸಲ್ಲಿಸಿ, ಪರಿಹಾರಕ್ಕೆ ಅರ್ಜಿ; ಇಬ್ಬರ ವಿರುದ್ಧ ಪ್ರಕರಣ ದಾಖಲು
ಮುಖ್ಯಮಂತ್ರಿಗಳ ಜನತಾ ದರ್ಶನದಲ್ಲಿ ನಕಲಿ ವೈದ್ಯಕೀಯ ದಾಖಲೆಗಳೊಂದಿಗೆ ನೆರವಿಗಾಗಿ ಅರ್ಜಿ ಸಲ್ಲಿಸಿದ್ದ ಇಬ್ಬರ ವಿರುದ್ಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿದೆ.

