ನಕ್ಸಲರ ಹತ್ಯೆ

ಛತ್ತೀಸ್‌ಗಢ ಎನ್‌ಕೌಂಟರ್: ಇಬ್ಬರು ನಕ್ಸಲರನ್ನು ಹೊಡೆದುರುಳಿಸಿದ ಸೇನೆ; 2 ದಿನದಲ್ಲಿ ಸಾವಿನ ಸಂಖ್ಯೆ 6ಕ್ಕೆ ಏರಿಕೆ!
ಬಿಜಾಪುರ ಪೊಲೀಸ್ ವರಿಷ್ಠಾಧಿಕಾರಿ ಜಿತೇಂದ್ರ ಯಾದವ್ ಅವರ ಪ್ರಕಾರ, ಜಿಲ್ಲೆಯ ವಾಯುವ್ಯ ಪ್ರದೇಶದ ಕಾಡುಗಳು ಮತ್ತು ಬೆಟ್ಟಗಳಲ್ಲಿ ಭಾನುವಾರ ಬೆಳಿಗ್ಗೆ ಈ ಎನ್‌ಕೌಂಟರ್ ನಡೆದಿದೆ.

ಛತ್ತೀಸ್‌ಗಢ: ಎನ್‌ಕೌಂಟರ್‌ನಲ್ಲಿ ಇಬ್ಬರು ನಕ್ಸಲರನ್ನು ಹೊಡೆದುರುಳಿಸಿದ ಭದ್ರತಾ ಪಡೆ!
ಛತ್ತೀಸ್‌ಗಢದ ಮನ್ಪುರ್-ಮೊಹ್ಲಾ-ಅಂಬಾಘರ್ ಚೌಕಿ ಜಿಲ್ಲೆಯಲ್ಲಿ ಬುಧವಾರ ಭದ್ರತಾ ಸಿಬ್ಬಂದಿಯೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ನಕ್ಸಲರು ಸಾವನ್ನಪ್ಪಿದ್ದಾರೆ.

ದೇಶದ ಹೊರಗೆ 'Operation Sindoor': ದೇಶದೊಳಗೆ 'Mission Sankalp'; 26 ನಕ್ಸಲರನ್ನು ಕೊಂದ ಭಾರತೀಯ ಸೇನೆ!
ಕರ್ರೆಗುಟ್ಟ ಬೆಟ್ಟಗಳು ಮತ್ತು ಛತ್ತೀಸ್‌ಗಢ-ತೆಲಂಗಾಣ ಗಡಿಯಲ್ಲಿರುವ ಬೆಟ್ಟಗಳಲ್ಲಿ ಏಪ್ರಿಲ್ 21ರಂದು 'ಮಿಷನ್ ಸಂಕಲ್ಪ' ಎಂಬ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗಿದ್ದು, ಇದರಲ್ಲಿ ಸುಮಾರು 24 ಸಾವಿರ ಸೈನಿಕರು ಭಾಗಿಯಾಗಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

Naxal Encounter: ಐವರು ನಕ್ಸಲರನ್ನು ಹೊಡೆದುರುಳಿಸಿದ ಭದ್ರತಾ ಪಡೆಗಳು
ನಾರಾಯಣಪುರ ಜಿಲ್ಲೆಯ ಅಬುಜ್ಮದ್ ಪ್ರದೇಶದಲ್ಲಿ ಭದ್ರತಾ ಪಡೆಗಳು-ನಕ್ಸಲ್ ಎನ್‌ಕೌಂಟರ್‌ನಲ್ಲಿ 5 ನಕ್ಸಲರ ಶವಗಳನ್ನು ವಶಪಡಿಸಿಕೊಳ್ಳಲಾಗಿದೆ.

ಛತ್ತೀಸ್‌ಗಢ: ಎನ್‌ಕೌಂಟರ್‌ನಲ್ಲಿ 8 ನಕ್ಸಲರ ಹತ್ಯೆ, ಓರ್ವ ಭದ್ರತಾ ಪಡೆ ಸಿಬ್ಬಂದಿ ಹುತಾತ್ಮ
ಛತ್ತೀಸಗಢದ ನಾರಾಯಣಪುರ ಜಿಲ್ಲೆಯಲ್ಲಿ ಶನಿವಾರ ನಡೆದ ಎನ್‌ಕೌಂಟರ್‌ನಲ್ಲಿ ಎಂಟು ನಕ್ಸಲರ ಹತ್ಯೆ ಮಾಡಲಾಗಿದೆ. ಘಟನೆಯಲ್ಲಿ ಓರ್ವ ಭದ್ರತಾ ಸಿಬ್ಬಂದಿ ಹುತಾತ್ಮರಾಗಿದ್ದು, ಮತ್ತಿಬ್ಬರು ಭದ್ರತಾ ಸಿಬ್ಬಂದಿಗೆ ಗಾಯಗಳಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಛತ್ತೀಸಗಢ: ಭದ್ರತಾ ಪಡೆಗಳ ಎನ್‌ಕೌಂಟರ್‌ಗೆ ಇಬ್ಬರು ನಕ್ಸಲರು ಬಲಿ
ಭದ್ರತಾ ಸಿಬ್ಬಂದಿ ನಕ್ಸಲ್ ವಿರೋಧಿ ಕಾರ್ಯಾಚರಣೆಗೆ ಹೊರಟಿದ್ದಾಗ ಮದ್ದೇಡ್ ಪೊಲೀಸ್ ಠಾಣೆ ವ್ಯಾಪ್ತಿಯ ಅರಣ್ಯದಲ್ಲಿ ಗುಂಡಿನ ಚಕಮಕಿ ನಡೆದಿದೆ. ಬಳಿಕ ಇಬ್ಬರು ನಕ್ಸಲರ ಮೃತದೇಹಗಳು ಮತ್ತು ಶಸ್ತ್ರಾಸ್ತ್ರಗಳನ್ನು ಸ್ಥಳದಿಂದ ವಶಪಡಿಸಿಕೊಳ್ಳಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮಹಾರಾಷ್ಟ್ರ: ವಿಧ್ವಂಸಕ ಕೃತ್ಯಕ್ಕೆ ಸಂಚು; ಗಡ್ಚಿರೋಲಿ ಎನ್‌ಕೌಂಟರ್‌ನಲ್ಲಿ ನಾಲ್ವರು ನಕ್ಸಲರ ಹತ್ಯೆ
ಮಹಾರಾಷ್ಟ್ರದ ಗಡ್ಚಿರೋಲಿ ಜಿಲ್ಲೆಯಲ್ಲಿ ಮಂಗಳವಾರ ಪೊಲೀಸರು ನಡೆಸಿದ ಎನ್‌ಕೌಂಟರ್‌ನಲ್ಲಿ ನಾಲ್ವರು ನಕ್ಸಲರು ಹತರಾಗಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಈ ನಾಲ್ವರು ನಕ್ಸಲರ ಪತ್ತೆಗೆ ಒಟ್ಟಾರೆ 36 ಲಕ್ಷ ರೂಪಾಯಿಗಳ ಬಹುಮಾನ ಘೋಷಿಸಲಾಗಿತ್ತು.

ಛತ್ತೀಸ್‌ಗಢ: ಭದ್ರತಾ ಪಡೆಯೊಂದಿಗಿನ ಎನ್‌ಕೌಂಟರ್‌ನಲ್ಲಿ ಮೂವರು ನಕ್ಸಲರ ಹತ್ಯೆ
ಛತ್ತೀಸ್‌ಗಢದ ಕಂಕೇರ್ ಜಿಲ್ಲೆಯಲ್ಲಿ ಭಾನುವಾರ ಬೆಳಗ್ಗೆ ಭದ್ರತಾ ಪಡೆಯೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ಮೂವರು ನಕ್ಸಲರು ಹತ್ಯಯಾಗಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಛತ್ತೀಸ್‌ಗಢ: ದಾಂತೇವಾಡದಲ್ಲಿ ಭದ್ರತಾ ಸಿಬ್ಬಂದಿ-ನಕ್ಸಲೀಯರ ನಡುವೆ ಗುಂಡಿನ ಚಕಮಕಿ, ಇಬ್ಬರು ಮಹಿಳಾ ನಕ್ಸಲೀಯರ ಹತ್ಯೆ
ದಾಂತೇವಾಡ ಜಿಲ್ಲೆಯಲ್ಲಿ ಭದ್ರತಾ ಸಿಬ್ಬಂದಿಯೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ಇಬ್ಬರು ಮಹಿಳಾ ನಕ್ಸಲೀಯರು ಹತರಾಗಿದ್ದಾರೆ.

