ದೇಶನಡ್ಡಾ ಭೇಟಿ ವೇಳೆ ಭದ್ರತಾ ಲೋಪ: ಪ.ಬಂಗಾಳದ ಮೂವರು ಐಪಿಎಸ್ ಅಧಿಕಾರಿಗಳು ಕೇಂದ್ರ ಸೇವೆಗೆ ನಿಯೋಜನೆ; ಗೃಹ ಇಲಾಖೆ ಕ್ರಮ
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ. ನಡ್ಡಾ ಭೇಟಿ ವೇಳೆಯಲ್ಲಿ ಭದ್ರತಾ ಲೋಪ ಆರೋಪದ ಮೇರೆಗೆ ಕೇಂದ್ರ ಸೇವೆಗೆ ನಿಯೋಜಿಸಲು ಪಶ್ಚಿಮ ಬಂಗಾಳದ ಮೂವರು ಐಪಿಎಸ್ ಅಧಿಕಾರಿಗಳಿಗೆ ಕೇಂದ್ರ ಗೃಹ ಸಚಿವಾಲಯ ಶನಿವಾರ ಏಕಪಕ್ಷೀಯವಾಗಿ ಸಮನ್ಸ್ ಜಾರಿ ಮಾಡಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.