ನಳಿನ್ ಕುಮಾರ್ ಕಟೀಲು

ಪಕ್ಷದ ಕಾರ್ಯಕರ್ತರಲ್ಲಿ ಭಿನ್ನಾಭಿಪ್ರಾಯಗಳಿಲ್ಲ; ಅದು ಲೋಕಸಭೆ ಚುನಾವಣೆಗೆ ತಯಾರಿ ಅಷ್ಟೇ: ನಳಿನ್ ಕುಮಾರ್ ಕಟೀಲು
ಇತ್ತೀಚಿನ ವಿಧಾನಸಭೆ ಚುನಾವಣೆಯಲ್ಲಿ ಪಕ್ಷದ ಸೋಲಿನ ನಂತರ ನಾನು ರಾಜ್ಯಾದ್ಯಂತ ಪ್ರವಾಸ ಮಾಡಿದ್ದು ಬಿಜೆಪಿ ಕಾರ್ಯಕರ್ತರ ಮಧ್ಯೆ ಜಗಳ ಭಿನ್ನಾಭಿಪ್ರಾಯಗಳಿಲ್ಲ, ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಪಕ್ಷದ ಗೆಲುವಿಗಾಗಿ ಅವರು ಉತ್ಸುಕತೆಯಿಂದ ಕೆಲಸ ಮಾಡುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಹೇಳಿದ್ದಾರೆ.

ನಳಿನ್ ಕುಮಾರ್ ಕಟೀಲ್ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವುದಿಲ್ಲ: ಬಸವರಾಜ ಬೊಮ್ಮಾಯಿ
2023ರ ಕರ್ನಾಟಕ ವಿಧಾನಸಭೆ ಚುನಾವಣೆಯ ಫಲಿತಾಂಶದಲ್ಲಿ ಕಾಂಗ್ರೆಸ್ ಪಕ್ಷ ಪೂರ್ಣ ಬಹುಮತದೊಂದಿಗೆ ಅಧಿಕಾರದ ಗದ್ದುಗೆ ಹಿಡಿಯುತ್ತಿದೆ. 2019ರ ಜುಲೈನಿಂದ ಈವರೆಗೆ ಅಧಿಕಾರ ಹಿಡಿದಿದ್ದ ಬಿಜೆಪಿ ವಿರುದ್ಧ ಆಡಳಿತ ವಿರೋಧಿ ಅಲೆ ಎದ್ದ ಕಾರಣ ರಾಜ್ಯದ ಮತದಾರರು ಸಂಪೂರ್ಣವಾಗಿ ತಿರಸ್ಕರಿಸಿದರು.

ಈ ಬಾರಿಯ ಚುನಾವಣೆ ಟಿಪ್ಪು v/s ಸಾವರ್ಕರ್ ಮಧ್ಯೆ, ಈ ದೇಶಕ್ಕೆ ಟಿಪ್ಪು ಬೇಕಾ, ಸಾವರ್ಕರ್ ಬೇಕಾ ಬನ್ನಿ ಚರ್ಚೆ ಮಾಡೋಣ ಸಿದ್ದರಾಮಣ್ಣ: ನಳಿನ್ ಕುಮಾರ್ ಕಟೀಲು
ಟಿಪ್ಪು-ವೀರ ಸಾವರ್ಕರ್ ವಿಚಾರದಲ್ಲಿ ಕಾಂಗ್ರೆಸ್-ಬಿಜೆಪಿ ನಾಯಕರ ಮಧ್ಯೆ ಆಗಾಗ ವಾಕ್ಸಮರ ಆಗುವುದುಂಟು. ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ರಾಜ್ಯದಲ್ಲಿ ಟಿಪ್ಪು ಜಯಂತಿಯನ್ನು ಆಚರಣೆಗೆ ತಂದವರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ. ಟಿಪ್ಪು ವಿಷಯ ಬಂದಾಗ ಬಿಜೆಪಿ ನಾಯಕರು ಕೆಂಡಮಂಡಲವಾಗಿಬಿಡುತ್ತಾರೆ.

ನಳಿನ್ ಕುಮಾರ್ ಕಟೀಲ್ ಒಬ್ಬ ಅಯೋಗ್ಯ, ಅವಿವೇಕಿ; ವಿವಾಹಿತ ಮಹಿಳೆ ಜೊತೆ ಅಕ್ರಮ ಸಂಬಂಧ ಹೊಂದಿದ್ದ: ಕಾಂಗ್ರೆಸ್ ವಕ್ತಾರ ಲಕ್ಷ್ಮಣ್
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಒಬ್ಬ ಡ್ರಗ್ ಪೆಡ್ಲರ್ ಎಂದು ಹೇಳಿಕೆ ನೀಡಿದ ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲ್ ಅವರನ್ನು ಕಾಂಗ್ರೆಸ್ ನಾಯಕರು ಹಿಗ್ಗಾಮುಗ್ಗ ತರಾಟೆಗೆ ತೆಗೆದುಕೊಳ್ಳುತ್ತಿದ್ದಾರೆ.

ಸಿದ್ದರಾಮಯ್ಯನವರೇ ದೊಡ್ಡ ಭಯೋತ್ಪಾದಕ: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು
ಆಡಳಿತ ಮತ್ತು ವಿಪಕ್ಷ ನಾಯಕರ ಮಧ್ಯೆ ವಾಗ್ದಾಳಿ ನಿಲ್ಲುತ್ತಲೇ ಇಲ್ಲ, ಮಂಗಳೂರಿನಲ್ಲಿ ಇಂದು ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಯಡಿಯೂರಪ್ಪನವರು ನಮ್ಮ ಸರ್ವಶ್ರೇಷ್ಠ ನಾಯಕರು, ಇಲ್ಲಿ ಯಾವುದೇ ಬಣ ಇಲ್ಲ: ನಳಿನ್ ಕುಮಾರ್ ಕಟೀಲು
ಬಿಜೆಪಿಯಲ್ಲಿ ವಲಸಿಗರು, ಮೂಲ ನಾಯಕರು ಎಂಬ ಪ್ರಶ್ನೆ ಉದ್ಭವಿಸುವುದಿಲ್ಲ. ಪಕ್ಷಕ್ಕೆ ಬಂದು ಚುನಾವಣೆಯಲ್ಲಿ ನಿಂತು ಗೆದ್ದ ನಂತರ ಅವರು ಬಿಜೆಪಿ ಪಕ್ಷದವರು, ಎಲ್ಲರೂ ಒಂದೇ ಕುಟುಂಬದಂತೆ, ಹೀಗಾಗಿ ಸಂಪುಟ ರಚನೆ ವೇಳೆ ಪ್ರಾದೇಶಿಕ ಮತ್ತು ಸಾಮಾಜಿಕ ನ್ಯಾಯವನ್ನು ಪರಿಶೀಲಿಸಿ ಸಂಪುಟದಲ್ಲಿ ಸಚಿವ ಸ್ಥಾನ ನೀಡಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ತಿಳ

ನಾಯಕತ್ವ ಬದಲಾವಣೆ ಇಲ್ಲ, ಯಡಿಯೂರಪ್ಪ ನಮ್ಮ ಸರ್ವಸಮ್ಮತ ನಾಯಕ: ನಳಿನ್ ಕುಮಾರ್ ಕಟೀಲು
ಸರ್ಕಾರದಲ್ಲಿ ಮುಖ್ಯಮಂತ್ರಿ ನಾಯಕತ್ವ ಬದಲಾವಣೆ ಇಲ್ಲ, ಯಡಿಯೂರಪ್ಪನವರು ನಮ್ಮ ಸರ್ವಸಮ್ಮತ ನಾಯಕರು, ಇನ್ನೆರಡು ವರ್ಷಗಳ ಕಾಲ ಸರ್ಕಾರದ ಅವಧಿ ಮುಗಿಯುವವರೆಗೂ ಅವರೇ ಮುಖ್ಯಮಂತ್ರಿಯಾಗಿ ಇರುತ್ತಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಸ್ಪಷ್ಟಪಡಿಸಿದ್ದಾರೆ.

ಸಿದ್ದರಾಮಯ್ಯನವರು ಕಾಂಗ್ರೆಸ್ ನ ವಿದೂಷಕ, 'ಕಾಡು ಮನುಷ್ಯ' ಪದ ಬಳಕೆ ಶೋಭೆಯಲ್ಲ: ಬಿಜೆಪಿ ತಿರುಗೇಟು
ಚುನಾವಣೆ ಸಮಯದಲ್ಲಿ ರಾಜಕೀಯ ಪಕ್ಷಗಳ ನಾಯಕರ ಮಧ್ಯೆ ಬಿರುಸಿನ ವಾಗ್ದಾಳಿ ನಡೆಯುವುದು ಸಾಮಾನ್ಯ. ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ನಡುವಿನ ವಾಕ್ಸಮರ ತಾರಕಕ್ಕೇರಿದೆ.

ಕರ್ನಾಟಕ-ಕೇರಳ ಗಡಿ ಬಂದ್: ಮುಖ್ಯಮಂತ್ರಿ ಪಿನರಾಯಿ ವಿಜಯನ್ ಅವರ ವೈಫಲ್ಯ ಎಂದ ಬಿಜೆಪಿ
ಕರ್ನಾಟಕ-ಕೇರಳ ಗಡಿಭಾಗವನ್ನು ಮುಚ್ಚಿರುವ ಬಗ್ಗೆ ಕೇರಳ ಮತ್ತು ಕರ್ನಾಟಕ ಸರ್ಕಾರಗಳ ಮಧ್ಯೆ ವಾದ-ವಿವಾದಗಳ ಮುಂದುವರಿದಿರುವಾಗ ಬಿಜೆಪಿ ಈ ವಿಷಯವನ್ನು ರಾಜಕೀಯವಾಗಿ ಬಳಸಿಕೊಳ್ಳಲು ಯತ್ನಿಸುತ್ತಿದೆ ಎನ್ನಲಾಗುತ್ತಿದೆ.

