ರಾಜ್ಯಶಾಸಕ ಅಖಂಡ ಶ್ರೀನಿವಾಸಮೂರ್ತಿ ಮನೆ ಮೇಲೆ ದಾಳಿ; ಮುಖ್ಯ ಆರೋಪಿ ನವೀನ್ ಸೇರಿದಂತೆ 110 ಮಂದಿ ಬಂಧನ
ಪುಲಕೇಶಿ ನಗರದ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಅವರ ಮನೆ ಮೇಲೆ ತೀವ್ರ ಪ್ರಮಾಣದಲ್ಲಿ ಕಲ್ಲು ತೂರಾಟ ನಡೆಸಿ ಅದು ಹಿಂಸಾರೂಪಕ್ಕೆ ತಿರುಗಿ ಇಬ್ಬರು ಸಾವಿಗೀಡಾದ ಘಟನೆಗೆ ಸಂಬಂಧಿಸಿದಂತೆ ಸೋಷಿಯಲ್ ಮೀಡಿಯಾದಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿರುವ ಹಿನ್ನೆಲೆಯಲ್ಲಿ ಮುಖ್ಯ ಆರೋಪಿ ನವೀನ್ ನನ್ನು ಬಂಧಿಸಲಾಗಿದೆ.